ಸಹಿ ಸಂಗ್ರಹ, ರಾಜಕೀಯ ಹೇಳಿಕೆ ನೀಡದೆ ಕೋವಿಡ್ ನಿಯಂತ್ರಣಕ್ಕೆ ಕೆಲಸ ಮಾಡಿ: ಬಿಜೆಪಿ ಶಾಸಕರಿಗೆ ಬಿಎಸ್ವೈ ಸೂಚನೆ
ಬೆಂಗಳೂರು, ಜೂ.7: ನಾಯಕತ್ವ ಬದಲಾವಣೆ, ದಿಲ್ಲಿ ಪ್ರಯಾಣ, ಸಹಿ ಸಂಗ್ರಹಗಳ ರಾಜಕೀಯ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿ ಶಾಸಕರಿಗೆ ಕೆಲ ಕಿವಿಮಾತುಗಳನ್ನು ಹೇಳಿದ್ದು, ರಾಜಕೀಯ ಹೇಳಿಕೆಗಳನ್ನು ನೀಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ
— B.S. Yediyurappa (@BSYBJP) June 7, 2021