ತುಮಕೂರು, ಜೂ.10: ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು.
ಈ ಹಿಂದೆ ಎಸ್ಪಿಯಾಗಿದ್ದ ಡಾ.ಕೋ.ನ.ವಂಶಿಕೃಷ್ಣ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಯಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ರಾಹುಲ್ ಕುಮಾರ್ ನಿಯುಕ್ತಿಗೊಂಡಿದ್ದರು.