ರಾಜ್ಯದಲ್ಲಿ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ: ಹೈಕೋರ್ಟ್ ಗೆ ಸರಕಾರ ಮಾಹಿತಿ | Vartha Bharati- ವಾರ್ತಾ ಭಾರತಿ

--

ರಾಜ್ಯದಲ್ಲಿ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ: ಹೈಕೋರ್ಟ್ ಗೆ ಸರಕಾರ ಮಾಹಿತಿ

ಬೆಂಗಳೂರು, ಜೂ.10: ರಾಜ್ಯದಲ್ಲಿ ಈವರೆಗೆ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಸರಕಾರ ಹೈಕೋರ್ಟ್‍ಗೆ ಗುರುವಾರ ಮಾಹಿತಿ ನೀಡಿದೆ.

ಕೋರನ ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ರಾಜ್ಯ ಸರಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ರಾಜ್ಯದಲ್ಲಿ ಈವರೆಗೆ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 1,947 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 157 ಸೋಂಕಿತರು ಮೃತಪಟ್ಟಿದ್ದಾರೆ. ಕೇಂದ್ರ ಸರಕಾರ 22,050 ಚುಚ್ಚುಮದ್ದು ಹಂಚಿಕೆ ಮಾಡಿದ್ದು, ಈವರೆಗೆ 19,950 ಡೋಸ್‍ಗಳನ್ನು ತಲುಪಿಸಿದೆ ಎಂದು ಪೀಠಕ್ಕೆ ತಿಳಿಸಿದರು.

ಪ್ರತಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ 6 ರಿಂದ 8 ವಾರಗಳಲ್ಲಿ 30 ವಯಲ್ಸ್ ನೀಡುವುದು ಅಗತ್ಯವಿದೆ. ಸೋಂಕು ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್ ಜೂನ್ 9ರಂದು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಬ್ಲ್ಯಾಕ್ ಫಂಗಸ್‍ಗೆ ಔಷಧ ಪಡೆಯಲು ಕೇಂದ್ರ ಸರಕಾರ ಪ್ರಪಂಚದ ಹಲವು ದೇಶಗಳನ್ನು ಸಂಪಕಿರ್ಸಿದೆ. ತಜ್ಞರೊಂದಿಗೆ ಸಮಾಲೋಚನೆ ನಡೆಸಿದೆ. ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಚುಚ್ಚುಮದ್ದು ಸಹ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಹೇಳಿಕೆ ದಾಖಲಿಸಿಕೊಂಡು ನ್ಯಾಯಪೀಠ, ಐಸಿಎಂಆರ್ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲ ಆಸ್ಪತ್ರೆಗಳಿಗೂ ತಲುಪಿಸಬೇಕು. ರಾಜ್ಯ ಸರಕಾರ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯ ಔಷಧ ಪೂರೈಸುವಂತೆ ಕೇಂದ್ರಕ್ಕೆ ನಿಯಮಿತವಾಗಿ ಬೇಡಿಕೆ ಸಲ್ಲಿಸಬೇಕು. ಅದರಂತೆ ಕೇಂದ್ರ ಸರಕಾರ ಔಷಧ ಮತ್ತು ಚುಚ್ಚುಮದ್ದು ಪೂರೈಸಬೇಕು. ಮುಂದಿನ ವಿಚಾರಣೆ ಸಂದರ್ಭದಲ್ಲಿ ರಾಜ್ಯದಲ್ಲಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಅಂಕಿ ಅಂಶಗಳ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top