ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಸಿದ್ದರಾಮಯ್ಯ ಆಗ್ರಹ
ಬೆಂಗಳೂರು, ಜೂ. 14: `ಕೊರೊನ ವೈರಸ್ ಸೋಂಕನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದುದರಿಂದ ವಿಪತ್ತು ಪರಿಹಾರದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ಐದು ಲಕ್ಷ ರೂ.ಪರಿಹಾರ ನೀಡಲು ಸಾಧ್ಯ ಇದೆ. ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟು ಈ ಅವಕಾಶವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬಳಸಿಕೊಳ್ಳಬೇಕು' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕೊರೋನ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ರಾಜ್ಯ ಬಿಜೆಪಿ ಸರಕಾರ ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ 5 ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸುತ್ತೇನೆ' ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.
Next Story