ನಟ ಸಂಚಾರಿ ವಿಜಯ್ ಅಂಗಾಂಗ ದಾನ: ಕೃತಜ್ಞತೆ ಸಲ್ಲಿಸಿದ ಸಿಎಂ ಯಡಿಯೂರಪ್ಪ
ಬೆಂಗಳೂರು, ಜೂ.15: ರಸ್ತೆ ಅಪಘಾತದಲ್ಲಿ ಮೃತಪಟ್ಟ ಚಲನಚಿತ್ರ ನಟ ಸಂಚಾರಿ ವಿಜಯ್ ಅವರ ಅಂಗಾಂಗಗಳನ್ನು ಅಗತ್ಯ ಇರುವವರಿಗೆ ದಾನ ಮಾಡಿದ್ದು, ಈಗಾಗಲೇ ಇಬ್ಬರಿಗೆ ಕಣ್ಣು, ಒಬ್ಬರಿಗೆ ಕಿಡ್ನಿ ಕಸಿ ಯಶಸ್ವಿಯಾಗಿ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಅವರು ವಿಜಯ್ ಕುಟುಂಬದವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ' ಎಂದು ತಿಳಿಸಿದ್ದಾರೆ.
'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ' : ಸಿಎಂ @BSYBJP.
— CM of Karnataka (@CMofKarnataka) June 15, 2021