ಕರ್ನಾಟಕದ ರಣಜಿ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿಜಯಕೃಷ್ಣ ನಿಧನ | Vartha Bharati- ವಾರ್ತಾ ಭಾರತಿ

--

ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಕರ್ನಾಟಕದ ರಣಜಿ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿಜಯಕೃಷ್ಣ ನಿಧನ

ಬೆಂಗಳೂರು, ಜೂ.17: ಹೃದಯ, ಮೂತ್ರಪಿಂಡ(ಕಿಡ್ನಿ) ಸಹಿತ ಬಹು ಅಂಗಾಗ ವೈಫಲ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೆ ಕರ್ನಾಟಕದ ರಣಜಿ ತಂಡದ ಮಾಜಿ ಆಟಗಾರ ಬಿ. ವಿಜಯಕೃಷ್ಣ(71) ಅವರು ಗುರುವಾರ ನಗರದಲ್ಲಿ ನಿಧನರಾಗಿದ್ದಾರೆ.

ಮೈಸೂರು ಮೂಲದ ಸೋಮನಾಥಪುರದ ವಿಜಯಕೃಷ್ಣ ಅವರು ಬಂಧು-ಮಿತ್ರರು ಸಹಿತ ಸಾವಿರಾರು ಅಭಿಮಾನಿಗಳನ್ನು ಅಗಲಿದ್ದಾರೆ. ರಣಜಿ ಕ್ರಿಕೆಟ್‍ನ ಎಡಗೈ ಬ್ಯಾಟ್ಸ್ ಮನ್ ಹಾಗೂ ಸ್ಪಿನ್ನರ್ ಆಗಿದ್ದ ವಿಜಯಕೃಷ್ಣ ಅವರು ಬಹು ಅಂಗಾಂಗಗಳ ವೈಫಲ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ವಿಜಯಕೃಷ್ಣ ಅವರು ದಲಿತ ಸಮುದಾಯದ(ಎರಡನೆಯ) ನಿವೃತ್ತ ಐಎಎಸ್ ಅಧಿಕಾರಿ ಆರ್.ಭರಣಯ್ಯ ಅವರ ಪುತ್ರ ಹಾಗೂ ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ನೆಲಮಂಗಲ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿದ್ದ ಶಾಸಕ ಆರ್.ಗುರುಪ್ರಸಾದ್ ಅವರ ಸಹೋದರ. ಅಲ್ಲದೆ, ನಿವೃತ್ತ ಐಪಿಎಸ್ ಅಧಿಕಾರಿ ಸುಭಾಷ್ ಭರಣಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯನವರ ಹತ್ತಿರದ ಸಂಬಂಧಿಯೂ ಹೌದು.

ವಿಜಯಕೃಷ್ಣ ಅವರು 1968ರಿಂದ 1984ರವರೆಗೆ ಕರ್ನಾಟಕ ತಂಡದಲ್ಲಿ ಆಡಿದ್ದರು. 80 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿ ಆಟವಾಡಿದ್ದ ವಿಜಯಕೃಷ್ಣ 2297 ರನ್‍ಗಳನ್ನು ಗಳಿಸಿದ್ದಾರೆ. ಅದರಲ್ಲಿ ಎರಡು ಶತಕಗಳಿವೆ. 194 ವಿಕೆಟ್‍ಗಳನ್ನೂ ಗಳಿಸಿದ್ದಾರೆ. ಇಎಎಸ್ ಪ್ರಸನ್ನ, ಬಿ.ಎಸ್.ಚಂದ್ರಶೇಖರ್, ಜಿ.ಆರ್.ವಿಶ್ವನಾಥ್, ಬ್ರಿಜೇಶ್ ಪಟೇಲ್ ಅವರ ಸಮಕಾಲೀನ ಆಟಗಾರರಾಗಿದ್ದರು.

ಕರ್ನಾಟಕ ತಂಡವು 1973-74ರಲ್ಲಿ ಮೊದಲ ಸಲ ರಣಜಿ ಟ್ರೋಫಿ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿಜಯಕೃಷ್ಣ ಬೆಂಗಳೂರಿನ ಕುಮಾರ ಪಾರ್ಕ್‍ನಲ್ಲಿ ವಾಸಿಸುತ್ತಿದ್ದರು. ತಮ್ಮ 15 ವರ್ಷಗಳ ಕ್ರಿಕೆಟ್ ಜೀವನದಲ್ಲಿ ಅತ್ಯುತ್ತಮ ಕ್ರಿಕೆಟ್ ಪಟು ಎನಿಸಿಕೊಂಡಿದ್ದ ಅವರು, ಅಪರೂಪದ ಆಲ್-ರೌಂಡರ್ ಆಗಿದ್ದರು. ಮೃತರ ಅಂತ್ಯಕ್ರಿಯೆ ಸಂಜೆ 4 ಗಂಟೆಯ ಸುಮಾರಿಗೆ ಇಲ್ಲಿನ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅವಮಾನ: `ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಣಜಿ ಕ್ರಿಕೆಟ್ ಆಟವಾಡಿದ ಅಪರೂಪದ ಆಟಗಾರ, ಅತ್ಯಂತ ಶೋಷಿತ ಸಮುದಾಯದಿಂದ ಬಂದು ಉನ್ನತ ಮಟ್ಟಕ್ಕೇರಿದ್ದ ವಿಜಯಕೃಷ್ಣ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪನವರು ಸಂತಾಪ ಸೂಚಿಸಿದ್ದನ್ನು ಬಿಟ್ಟರೆ ರಾಜ್ಯ ಸರಕಾರದ ಒಬ್ಬ ಪ್ರತಿನಿಧಿಯೂ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿಲ್ಲ. ಕನಿಷ್ಠ ಪಕ್ಷ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್‍ಸಿಎ) ಪ್ರತಿನಿಧಿಗಳು ತಿರುಗಿಯೂ ನೋಡಿಲ್ಲ. 15 ವರ್ಷ ಅತ್ಯುತ್ತಮ ಕ್ರಿಕೆಟ್ ಪಟು ಎನಿಸಿಕೊಂಡಿದ್ದ ವಿಜಯಕೃಷ್ಣ ಅವರಿಗೆ ಅನ್ಯಾಯ ಮತ್ತು ಅವಮಾನ ಮಾಡಲಾಗಿದೆ' ಎಂದು ಕುಟುಂಬದ ಸದಸ್ಯರು ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿ ಸಂತಾಪ: ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ 15 ವರ್ಷಗಳ ವೃತ್ತಿ ಜೀವನದಲ್ಲಿ ಅಪ್ರತಿಮ ಆಲ್ ರೌಂಡರ್ ಆಗಿದ್ದ ಅವರು 80 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿ 2 ಸಾವಿರ ರನ್‍ಗಳನ್ನು ಗಳಿಸಿ 194 ವಿಕೆಟ್‍ಗಳನ್ನು ಪಡೆದಿದ್ದರು. ಕರ್ನಾಟಕ ರಣಜಿ ಟ್ರೋಫಿಯನ್ನು ಎರಡು ಬಾರಿ ಗೆಲ್ಲಲು ಅವರು ಕಾರಣೀಭೂತರು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಮರಿಸಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top