ಡಿಸೆಂಬರ್ ವರೆಗೆ ಜಿಪಂ, ತಾಪಂ ಚುನಾವಣೆ ಇಲ್ಲ: ಸಚಿವ ಈಶ್ವರಪ್ಪ
ದಾವಣಗೆರೆ, ಜೂ.19: ಕೋವಿಡ್ ಕಾರಣ ರಾಜ್ಯದಲ್ಲಿ ಡಿಸೆಂಬರ್ ವರೆಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ನಡೆದಿರಲು ನಿರ್ಧರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ.21ರಂದು ಸಂಜೆ ನಾಲ್ಕು ಗಂಟೆಗೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಮಸ್ಯೆ ಬಗೆಹರಿದಿದೆ: ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿ ಒಂದು ಕುಟುಂಬ ಇದ್ದಂತೆ. ಒಂದು ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಇಲ್ಲಿ ಬಂದು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಶಾಸಕರಲ್ಲಿ ಮಾತನಾಡಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಹೋಗಿದ್ದಾರೆ ಎಂದರು.
Next Story