ಜೂ.21ರಿಂದ 3 ಸಾವಿರ ಕೆಎಸ್ಸಾರ್ಟಿಸಿ ಬಸ್ಸುಗಳ ಕಾರ್ಯಾಚರಣೆ ಆರಂಭ | Vartha Bharati- ವಾರ್ತಾ ಭಾರತಿ

--

ಜೂ.21ರಿಂದ 3 ಸಾವಿರ ಕೆಎಸ್ಸಾರ್ಟಿಸಿ ಬಸ್ಸುಗಳ ಕಾರ್ಯಾಚರಣೆ ಆರಂಭ

ಬೆಂಗಳೂರು, ಜೂ. 20: ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರಕಾರವು ರಾಜ್ಯದಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ಮೈಸೂರು ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಸಡಿಲಿಸಿ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಅನುಮತಿಸಲಾಗಿದೆ ಎಂದು ಕೆಎಸ್ಸಾರ್ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಅದರಂತೆ, ರಾಜ್ಯ ರಸ್ತೆ ಸಾರಿಗೆ ನಿಗಮವು ಜೂ.21ರಿಂದ ಜಾರಿಗೆ ಬರುವಂತೆ ಮೈಸೂರು ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಪ್ರಯಾಣಿಕರ ಜನದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಸ್ಥಳೀಯ ಮತ್ತು ದೂರ ಮಾರ್ಗದ ಅಂತರ ಜಿಲ್ಲಾ ಸಾರಿಗೆಗಳ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತಿದೆ. ಪ್ರಾರಂಭಿಕವಾಗಿ ಸುಮಾರು 3 ಸಾವಿರ ಬಸ್ಸುಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಂತರ್ ರಾಜ್ಯ ಮಾರ್ಗಗಳ ಕಾರ್ಯಾಚರಣೆಯ ಬಗ್ಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ನಾವು ನಮ್ಮ ಪತ್ರಿಕಾ ಪ್ರಕಟಣೆಯಲ್ಲಿ, ಮೈಸೂರು ಜಿಲ್ಲೆಯಲ್ಲಿ ಮಾತ್ರ ಬಸ್ ಸಂಚಾರವಿರುವುದಿಲ್ಲವೆಂದು ತಿಳಿಸಿದ್ದು, ತದನಂತರ ದಕ್ಷಿಣ ಕನ್ನಡ ಜಿಲ್ಲಾಡಳಿತವು ಹೊರಡಿಸಿರುವ ಆದೇಶದಲ್ಲಿ ಬಸ್ ಸಂಚಾರ ಇರುವುದಿಲ್ಲವೆಂದು ಆದೇಶಿಸಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಗಮವು‌ ಬಸ್ಸುಗಳ ಕಾರ್ಯಾಚರಣೆಯನ್ನು ಮುಂದಿನ ಆದೇಶದವರಗೂ ಮಾಡುವುದಿಲ್ಲ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top