ಕರ್ನಾಟಕದಲ್ಲಿ ಮೊದಲ ಡೆಲ್ಟಾ ಪ್ಲಸ್ ವೈರಸ್ ಮೈಸೂರಿನಲ್ಲಿ ಪತ್ತೆ: ಆರೋಗ್ಯ ಸಚಿವ ಸುಧಾಕರ್
ಬೆಂಗಳೂರು, ಜೂ. 23: ಕರ್ನಾಟಕದಲ್ಲಿ ಕೊರೋನ ಸೋಂಕಿನ ಡೆಲ್ಟಾ ಪ್ಲಸ್ ರೂಪಾಂತರದ ಮೊದಲ ಪ್ರಕರಣ ಮೈಸೂರಿನಲ್ಲಿ ವರದಿಯಾಗಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಬುಧವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿತ ವ್ಯಕ್ತಿಯಲ್ಲಿ ಯಾವುದೇ ಲಕ್ಷಣಗಳಿಲ್ಲ ಹಾಗೂ ಅವರ ಸಂಪರ್ಕಿತರಲ್ಲಿ ಯಾರೂ ವೈರಸ್ಗೆ ತುತ್ತಾಗಿಲ್ಲ ಎಂದು ಸ್ಪಷ್ಟಪಡಿಸಿದರು.
'ಮೈಸೂರಿನಲ್ಲಿ ಒಬ್ಬ ರೋಗಿಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಸೋಂಕು ಪತ್ತೆಯಾಗಿದೆ. ಅವರನ್ನು ನಾವು ಪ್ರತ್ಯೇಕಿಸಿದ್ದೇವೆ. ಅವನ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳಲ್ಲಿ ಯಾರಲ್ಲೂ ಸೋಂಕು ಇಲ್ಲ' ಎಂದು ತಿಳಿಸಿದರು.
Next Story