ಜು.5ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.2: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜು.5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ ಒಂದು ವಾರದಿಂದಲೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ರಾಯಚೂರು ಭಾಗದಲ್ಲಿ ಭಾರೀ ಮಳೆಯಾಗಿತ್ತು.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರಿದಿದ್ದು, ಜುಲೈ 5ರವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ.
Next Story