'ಅನ್ ಲಾಕ್ -3': ಜು.5 ರಿಂದ ಮಸೀದಿಗಳಲ್ಲಿ ನಮಾಝ್ ಗೆ ಅವಕಾಶ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯ ಸರಕಾರ ಶನಿವಾರ 'ಅನ್ ಲಾಕ್ -3' ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದು, ಇದರಲ್ಲಿ ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ಎಂದು ಸರಕಾರ ತಿಳಿಸಿತ್ತು. ಈ ಬಗ್ಗೆ ವಾರ್ತಾಭಾರತಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಅವರಲ್ಲಿ ಸ್ಪಷ್ಟನೆ ಕೇಳಿದಾಗ ಕೋವಿಡ್ ನಿಯಮಗಳನ್ನು ಪಾಲಿಸಿ ಮಸೀದಿಗಳಲ್ಲಿ ನಮಾಝ್ ಮಾಡಬಹುದು ಎಂದು ತಿಳಿಸಿದ್ದಾರೆ.
ಮಸೀದಿ ಮತ್ತು ಚರ್ಚ್ ಗಳಲ್ಲಿ ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಕಾಯ್ದುಕೊಂಡು ಕೋವಿಡ್ ಮಾರ್ಗಸೂಚಿ ಪಾಲಿಸಿ ಧಾರ್ಮಿಕ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಎನ್.ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.
Next Story