ಚಿಕ್ಕಮಗಳೂರು: ಎರಡು ದೇವಳದ ಕಾಣಿಕೆ ಹುಂಡಿಗಳಿಂದ ಕಳವು
ಚಿಕ್ಕಮಗಳೂರು, ಜು.14: ಚಿಕ್ಕಮಗಳೂರು ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿರುವ ಎರಡು ದೇವಸ್ಥಾನಳಿಗೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯನ್ನು ಒಡೆದು ನಗದು ದೋಚಿ ಪರಾರಿಯಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಇಲ್ಲಿನ ಕಲ್ಲೇಶ್ವರ ಸ್ವಾಮಿ ದೇವಸ್ಥಾನ ಹಾಗೂ ಪಕ್ಕದ ಮಾರಮ್ಮ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣವನ್ನೆಲ್ಲ ದೋಚಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story