ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ: ಸಚಿವ ಆರ್.ಅಶೋಕ್ ಕಿಡಿ
ಬೆಂಗಳೂರು, ಜು.20: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ವದಂತಿಗಳು ವಿರೋಧ ಪಕ್ಷಗಳ ಪಿತೂರಿಯಲ್ಲದೆ ಮತ್ತೇನಲ್ಲ. ಕಾಂಗ್ರೆಸ್ ನಾಯಕರು ಬಿಜೆಪಿಯ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುತ್ತಾರೆ. ಯಡಿಯೂರಪ್ಪ ಅವರೇ ಕರ್ನಾಟಕದ ಸಿಎಂ ಆಗಿ ಮುಂದುವರಿಯುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸುಮ್ಮನೆ ಗೊಂದಲ ಸೃಷ್ಟಿಸುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಿಸುವ ಬಗ್ಗೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
Next Story