ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು,ಜು.26: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದು,ಈ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
'ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ @BJP4Karnataka ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ. 3/4#ಹುಬ್ಬಳ್ಳಿ
— Siddaramaiah (@siddaramaiah) July 26, 2021
Next Story