ಬೆಳಗಾವಿಯಲ್ಲಿ ಪ್ರವಾಹ: ಪರಿಹಾರ ಕ್ರಮದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿದ್ದರಾಮಯ್ಯ
ಬೆಳಗಾವಿ, ಜು.27: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಇಂದು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ್, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಸಿಇಒ ದರ್ಶನ್ ಪ್ರವಾಹ ಪರಿಸ್ಥಿತಿ ಕುರಿತು ವಿವರಿಸಿದರು.
ಶಾಸಕರಾದ ಡಾ.ಅಂಜಲಿ ನಿಂಬಾಳ್ಕರ್, ಗಣೇಶ್ ಹುಕ್ಕೇರಿ, ಮಾಜಿ ಸಚಿವರಾದ ವೀರಕುಮಾರ್ ಪಾಟೀಲ್, ಎ.ಬಿ. ಪಾಟೀಲ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಮತ್ತಿತರರು ಹಾಜರಿದ್ದರು.
Next Story