Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ...

ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸುವಂತೆ ನೂತನ ಮುಖ್ಯಮಂತ್ರಿಗೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಆಗ್ರಹ

‘ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರಿ ಸಂಕಷ್ಟ’

ವಾರ್ತಾಭಾರತಿವಾರ್ತಾಭಾರತಿ30 July 2021 12:12 AM IST
share
ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸುವಂತೆ ನೂತನ ಮುಖ್ಯಮಂತ್ರಿಗೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಆಗ್ರಹ

ಬೆಂಗಳೂರು, ಜು.29: ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಆಗ್ರಹಿಸಿದೆ.

ನಗರದ ಅರಮನೆ ಮೈದಾನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಯುವ ಸಮೂಹ ಭಾರೀ ನಿರೀಕ್ಷೆ ಹೊಂದಿದೆ ಎಂದರು.

ಎಲ್ಲ ವರ್ಗದವರು ಹಿಂದೆಂದೂ ಇಲ್ಲದಷ್ಟು ಸಮಸ್ಯೆಗಳಲ್ಲಿ ಸಿಲುಕಿದ್ದಾರೆ. ಕೋವಿಡ್ ನಿಂದಾಗಿ ಸಾಕಷ್ಟು ಕೈಗಾರಿಕೆ, ವ್ಯಾಪಾರ ವಹಿವಾಟು ಮುಚ್ಚಿದ್ದು, ಜನ ಭಾರೀ ಪ್ರಮಾಣದಲ್ಲಿ ಉದ್ಯೋಗ ಕಳೆದುಕೊಂಡಿದ್ದಾರೆ. ಯುವ ಸಮೂಹಕ್ಕೆ ಉದ್ಯೋಗ ಕಲ್ಪಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.

ಕರ್ನಾಟಕ ಹೂಡಿಕೆಗೆ ಪ್ರಶಸ್ತವಾದ ತಾಣವಾಗಿದ್ದು, ನಾವಿನ್ಯತೆ, ಅನ್ವೇಷಣೆ, ನವೋದ್ಯಮ, ತಾಂತ್ರಿಕತೆ, ಪ್ರತಿಭೆಗಳ ತಾಣವಾಗಿದೆ. ಇಂತಹ ನಾಡಿಗೆ ಯುವ ನೇತಾರ ಬಸವರಾಜ ಬೊಮ್ಮಾಯಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಬೆಳೆಯುತ್ತಿರುವ ತಂತ್ರಜ್ಞಾನಕ್ಕೆ ಅನುಗುಣವಾಗಿ ಆಧುನಿಕತೆಯನ್ನು ಮೈಗೂಡಿಸಿಕೊಂಡು ಎಲ್ಲ ವಲಯಗಳಲ್ಲೂ ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು ಎಂದು ರಕ್ಷಾ ರಾಮಯ್ಯ ತಿಳಿಸಿದರು.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಬದುಕಿನ ಎಲ್ಲ ಆಯಾಮಗಳು, ಎಲ್ಲ್ಲ ಹಂತಗಳ ಮೇಲೂ ಪ್ರತಿಕೂಲ ದುಷ್ಪರಿಣಾಮ ಬೀರಿದ್ದು, ಹೊಸ ಸರಕಾರ ಜನರ ಮೇಲಿನ ಹೊರೆ ಕಡಿಮೆ ಮಾಡಬೇಕು. ಜನರ ಬದುಕಿನಲ್ಲಿ ನೆಮ್ಮದಿಯ ವಾತಾವರಣ ನಿರ್ಮಿಸಬೇಕು. ರಾಜ್ಯದ ಸಾಲದ ಮೊತ್ತ 4.60 ಲಕ್ಷ ಕೋಟಿ ರೂ. ದಾಟಿದ್ದು, ಕರ್ನಾಟಕವನ್ನು ಸಾಲದ ಸುಳಿಯಿಂದ ಪಾರು ಮಾಡಬೇಕು. ಕೇಂದ್ರದ ಮೇಲೆ ಒತ್ತಡ ಹೇರಿ ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ನೂತನ ಮುಖ್ಯಮಂತ್ರಿ ಅವರಿಗೆ ಇದು ನಿಜಕ್ಕೂ ಸುವರ್ಣಾವಕಾಶವಾಗಿದೆ ಎಂದು ಅವರು ತಿಳಿಸಿದರು.

ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೂಲಕ ಜಿ.ಎಸ್.ಟಿ. ಪರಿಹಾರವನ್ನು ಸೂಕ್ತ ರೀತಿಯಲ್ಲಿ ಪಡೆಯಲು ಪ್ರಯತ್ನಿಸಬೇಕು. ನ್ಯಾಯಬದ್ಧವಾಗಿ ಕೇಂದ್ರದ ಅನುದಾನ ಪಡೆಯಲು ಆದ್ಯತೆ ನೀಡಬೇಕು. ಲೋಕಸಭಾ ಸದಸ್ಯರು, ಆರು ಕೇಂದ್ರ ಸಚಿವರ ಜತೆ ನಿರಂತರವಾಗಿ ಸಭೆಗಳನ್ನು ನಡೆಸಿ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರದ ಕೈಗೊಂಬೆಯಾಗದೇ ಪರಿಣಾಮಕಾರಿ ಒತ್ತಡ ಹೇರಬೇಕು ಎಂದು ರಕ್ಷಾ ರಾಮಯ್ಯ ಒತ್ತಾಯಿಸಿದರು.

ಆಗಸ್ಟ್ 5 ಕ್ಕೆ ಸಂಸತ್ ಘೇರಾವ್: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಯುವ ಕಾಂಗ್ರೆಸ್‍ನಿಂದ ಸಂಸತ್ ಘೇರಾವ್ ಹಾಕಲು ತೀರ್ಮಾನಿಸಲಾಗಿದೆ. ಕಾರ್ಯಕಾರಿಣಿಯಲ್ಲಿ ಈ ಸಂಬಂಧ ಚರ್ಚೆ ನಡೆಸಿದ್ದು, ಯುವ ಕಾಂಗ್ರೆಸ್ ತಂಡ ದಿಲ್ಲಿಯಲ್ಲೂ ತನ್ನ ಹೋರಾಟ ಮುಂದುವರೆಸಲಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನ ವಿರೋಧಿ ತೀರ್ಮಾನಗಳ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕ ಮೊದಲಿನಿಂದಲೂ ಪ್ರಗತಿಪರ ಆಲೋಚನೆಗಳನ್ನೇ ಮಾಡುತ್ತಾ ಬಂದಿರುವ ವಿಭಿನ್ನ ರಾಜ್ಯವಾಗಿದ್ದು, ಉತ್ತರ ಕರ್ನಾಟಕಕ್ಕೆ ಸೇರಿರುವ ಮುಖ್ಯಮಂತ್ರಿ ಅವರು ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಒತ್ತು ನೀಡಬೇಕು. ಕಲ್ಯಾಣ ಕರ್ನಾಟಕ ಹೆಸರು ಬದಲಾವಣೆ ಮಾಡಿದರೆ ಸಾಲದು ನೈಜ ಅಭಿವೃದ್ಧಿಗೆ ಆದ್ಯತೆ ಕೊಡಬೇಕು. ಜಲ ಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ನೀವು ಕಳಸಾ ಬಂಡೂರಿ ಸೇರಿದಂತೆ ಎಲ್ಲ ಜಲ ವಿವಾದಗಳನ್ನು ಬಗೆಹರಿಸಲು ಆದ್ಯತೆ ನೀಡಬೇಕು ಎಂದು ರಕ್ಷಾ ರಾಮಯ್ಯ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ., ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಯಾದವ್, ಕಾರ್ಯದರ್ಶಿಗಳಾದ ಸುರಭಿ ದ್ವಿವೇದಿ, ವಿದ್ಯಾ ಬಾಲಕೃಷ್ಣ, ಸುಮಯ್ಯ ತಬ್ರೇಝ್ ಮತ್ತಿತರರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ವೈಫಲ್ಯಗಳ ವಿರುದ್ಧ ಹೋರಾಟ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X