ಕರ್ನಾಟಕ ಮಾದಿರಿಯಲ್ಲೆ ಮಹಾರಾಷ್ಟ್ರದಲ್ಲಿಯೂ ಕೆಎಂಎಫ್ ಆರಂಭಿಸಲು ಫಡ್ನವಿಸ್ ಸಲಹೆ | Vartha Bharati- ವಾರ್ತಾ ಭಾರತಿ

--

ಕರ್ನಾಟಕ ಮಾದಿರಿಯಲ್ಲೆ ಮಹಾರಾಷ್ಟ್ರದಲ್ಲಿಯೂ ಕೆಎಂಎಫ್ ಆರಂಭಿಸಲು ಫಡ್ನವಿಸ್ ಸಲಹೆ

ಬೆಂಗಳೂರು, ಆ. 1: ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದ್ದಾರೆ.

ರವಿವಾರ ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಲಾಗುತ್ತಿದೆ. ನಮ್ಮಲ್ಲಿಯೂ ಇದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು ಕೆಲಸ ಮಾಡಿದರೇ ರೈತ ಸಮೂಹಕ್ಕೆ ಇದರಿಂದ ಅನುಕೂಲವಾಗುತ್ತದೆ ಎಂದು ಹೇಳಿದರು.

ವಿದರ್ಭ ಭಾಗದಿಂದ ಕೆಎಂಎಫ್‍ನ ನಂದಿನಿ ಉತ್ಪನ್ನಗಳ ಮಾರಾಟವನ್ನು ಆರಂಭಿಸಿರುವುದು ಖುಷಿಯಾಗಿದೆ. ಸ್ಪರ್ಧಾತ್ಮಕ ದರದಲ್ಲಿ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನೀಡುತ್ತಿರುವುದನ್ನು ನಾನು ಕೇಳಿದ್ದೇನೆ. ಗ್ರಾಹಕರ ನೆಚ್ಚಿನ ನಂದಿನಿ ಉತ್ಪನ್ನಗಳು ಕರ್ನಾಟಕದಲ್ಲಿ ಮನೆ ಮಾತಾಗಿರುವುದನ್ನು ಗಮನಿಸಿದ್ದೇನೆ. ಸಹಕಾರಿ ತತ್ವವನ್ನು ಪರಿಪಾಲನೆ ಮಾಡಿಕೊಂಡು ಬರುತ್ತಿರುವ ಕೆಎಂಎಫ್ ನಂದಿನಿ ಉತ್ಪನ್ನಗಳು ಮಹಾರಾಷ್ಟ್ರದ ಪ್ರತಿ ಮನೆ ಮನೆಗೆ ತಲುಪಲಿ ಎಂದು ಫಡ್ನಾವಿಸ್ ಆಶಿಸಿದರು.

ಸಹಕಾರಿ ಕ್ಷೇತ್ರವು ವ್ಯವಹಾರಿಕವಾಗಿ ಅಭಿವೃದ್ದಿ ಹೊಂದಲು ಪ್ರಧಾನಿ ಮೋದಿ ಅವರು ಇತ್ತೀಚೆಗೆ ಕೇಂದ್ರದಲ್ಲಿ ಸಹಕಾರಿ ಸಚಿವಾಲಯವನ್ನು ಆರಂಭಿಸಿದ್ದಾರೆ. ಇದಕ್ಕೆ ಪೂರಕವಾಗಿ ಕೆಎಂಎಫ್‍ನಂತಹ ಸಂಸ್ಥೆಗಳು ಕರ್ತವ್ಯ ನಿರ್ವಹಿಸಿ ಸಹಕಾರಿ ರಂಗದ ಬೆಳವಣಿಗೆಗೆ ಶ್ರಮಿಸಲಿ. ಅದರ ನಂದಿನಿ ಹಾಲು ಮತ್ತು ಇತರೇ ಉತ್ಪನ್ನಗಳ ಮಾರುಕಟ್ಟೆ ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ನೆರವನ್ನು ನೀಡಲಾಗುವುದು. ದೇಶದ ಪ್ರತಿಷ್ಠಿತ ಅಮೂಲ್ ನಂತರ ಕೆಎಂಎಫ್ 2ನೆ ಸ್ಥಾನ ಗಿಟ್ಟಿಸಿರುವುದು ಸಹಕಾರಿ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ನಾಗ್ಪುರ್ ಪ್ರಾಂತ್ಯದಿಂದ ಪ್ರಾರಂಭಗೊಂಡಿರುವ ಕೆಎಂಎಫ್ ಉನ್ನತಿ ಮತ್ತು ಪ್ರಗತಿಗೆ ಎಲ್ಲ ಸಹಕಾರ ನೀಡುವ ಭರವಸೆ ನೀಡಿದರು.

ಕರ್ನಾಟಕ ಹಾಲು ಮಹಾ ಮಂಡಳಿಯನ್ನು ರಾಜ್ಯವಲ್ಲದೇ ನೆರೆಯ ರಾಜ್ಯಗಳಲ್ಲೂ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಿಸಲು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಕೆಎಂಎಫ್ ಬೆಳವಣಿಗೆಗೆ ತಮ್ಮದೇಯಾದ ವಿಶಿಷ್ಟ ಕೊಡುಗೆ ನೀಡುತ್ತಿರುವ ಬಾಲಚಂದ್ರ ಅವರ ಕಾರ್ಯವನ್ನು ಮನಸಾರೆ ಕೊಂಡಾಡಿದ ಫಡ್ನವಿಸ್, ಅಧ್ಯಕ್ಷರ ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸುತ್ತಿರುವ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಮುಕ್ತ ಕಂಠದಿಂದ ಫಡ್ನಾವಿಸ್ ಅಭಿನಂದಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಕೆಎಂಎಫ್ ರಾಷ್ಟ್ರದ ಎರಡನೆ ಅತಿದೊಡ್ಡ ಸಹಕಾರಿ ಹಾಲು ಮಹಾ ಮಂಡಳಿಯಾಗಿದ್ದು, ಪ್ರತಿನಿತ್ಯ ರಾಜ್ಯದ ಹೈನುಗಾರ ರೈತರಿಂದ 90 ಲಕ್ಷ ಲೀಟರ್ ಹಾಲು ಶೇಖರಣೆ ಮಾಡಿ ನಿತ್ಯ ಅಂದಾಜು 24ಕೋಟಿ ರೂ.ಹಣ ರೈತರಿಗೆ ಪಾವತಿಸಲಾಗುತ್ತಿದೆ. ರಾಜ್ಯದ ರೈತರಿಂದ ಶೇಖರಿಸುವ ಹಾಲನ್ನು ಸಂಸ್ಕರಿಸಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಉತ್ಕ್ರಷ್ಟ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸಕಾಲಕ್ಕೆ ಒದಗಿಸುತ್ತಿದೆ ಎಂದು ಹೇಳಿದರು.

ಕೆಎಂಎಫ್ ನಿತ್ಯ 50 ಲಕ್ಷ ಲೀಟರ್ ಹಾಲು ಸ್ಯಾಚೆ, ಯುಎಚ್‍ಟಿ, ಪ್ಲೆಕ್ಸಿ ಪೊಟ್ಟಣಗಳ ರೂಪದಲ್ಲಿ ಮಾರಾಟ ಮಾಡುವುದರ ಜೊತೆಗೆ ರಾಷ್ಟ್ರದ ಇತರೇ ಪ್ರಮುಖ ನಗರ ಪ್ರದೇಶಗಳಲ್ಲಿನ ಗ್ರಾಹಕರಿಗೂ ಗುಣಮಟ್ಟದ ಹಾಲು ದೊರಕುವಂತೆಮಾಡಲಾಗುತ್ತಿದೆ. ಮುಂಬೈ, ಪುಣೆ, ಚೆನ್ನೈ, ಹೈದರಾಬಾದ, ವಿಜಯವಾಡ, ಸೊಲ್ಲಾಪೂರ ಮತ್ತು ಗೋವಾ ಪ್ರದೇಶಗಳಲ್ಲಿ ಪ್ರತಿದಿನ 3 ಲಕ್ಷ ಲೀ.ಹಾಲು ಮಾರಾಟ ಮಾಡಲಾಗುತ್ತಿದ್ದು, ಅಲ್ಲಿನ ಗ್ರಾಹಕರಿಂದ ನಂದಿನಿ ಹಾಲಿನ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಇದರಿಂದ ರಾಷ್ಟ್ರಮಟ್ಟದಲ್ಲಿ ನಂದಿನಿ ಬ್ರಾಂಡ್ ಗುರುತಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.

ನೆರೆಯ ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಕೆಎಂಎಫ್‍ನಿಂದ ನಂದಿನಿ ಬ್ರಾಂಡ್‍ನ ಉತ್ಪನ್ನಗಳನ್ನು ಆರಂಭಿಸಿದ್ದೇವೆ. ಇದಕ್ಕೆ ಮಾಜಿ ಸಿಎಂ ದೇವೇಂದ್ರ ಫಡ್ನಾವಿಸ್ ಆಗಮಿಸಿ ಚಾಲನೆ ನೀಡಿರುವುದು ನಮಗೆ ಆನೆಬಲ ಬಂದಂತಾಗಿದೆ. ನಮ್ಮ ಕರ್ನಾಟಕದಲ್ಲಿ ಪ್ರಾರಂಭಿಸಿರುವ ಕ್ಷೀರಭಾಗ್ಯ ಯೋಜನೆಯನ್ನು ಮಹಾರಾಷ್ಟ್ರದ ನಾಗ್ಪುರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲೆಗಳಲ್ಲಿ ಮಕ್ಕಳ ಪೌಷ್ಠಿಕತೆ ದೃಷ್ಟಿಯಿಂದ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸುವಂತೆ ದೇವೇಂದ್ರ ಫಡ್ನವಿಸ್ ಅವರಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ನಾಗ್ಪುರ ಮಹಾನಗರ ಪಾಲಿಕೆಯ ಮೇಯರ್ ದಯಾಶಂಕರ ತಿವಾರಿ, ವಿಜಯಪುರ ಹಾಲು ಒಕ್ಕೂಟದ ಅಧ್ಯಕ್ಷ ಸಾಂಭಾಜಿ ಮಿಸಳೆ, ಕೆಎಂಎಫ್ ನಿರ್ದೇಶಕ ಕಾ.ಪು.ದಿವಾಕರಶೆಟ್ಟಿ, ಶ್ರೀಶೈಲಗೌಡ ಪಾಟೀಲ, ಸಿ.ವೀರಭದ್ರಬಾಬು, ಪ್ರಕಾಶ, ಆನಂದಕುಮಾರ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಸ್ವಾಗತಿಸಿದರು. ಮಾರುಕಟ್ಟೆ ವಿಭಾಗದ ನಿರ್ದೇಶಕ ಮೃತ್ಯುಂಜಯ ಕುಲಕರ್ಣಿ ವಂದಿಸಿದರು. 

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top