ರೋಗಗ್ರಸ್ತ ನಿಗಮಗಳ ಪುನಶ್ಚೇತನಕ್ಕೆ ವಿನೂತನ ಯೋಜನೆ: ಸಚಿವ ಮುರುಗೇಶ್ ನಿರಾಣಿ | Vartha Bharati- ವಾರ್ತಾ ಭಾರತಿ

--

`ವಿದ್ಯಾವಂತ ಯುವಕ/ಯುವತಿಯರ ಉದ್ಯೋಗಕ್ಕೆ ಆದ್ಯತೆ'

ರೋಗಗ್ರಸ್ತ ನಿಗಮಗಳ ಪುನಶ್ಚೇತನಕ್ಕೆ ವಿನೂತನ ಯೋಜನೆ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು, ಆ. 13: `ರಾಜ್ಯದಲ್ಲಿನ ರೋಗಗ್ರಸ್ತ ನಿಗಮಗಳಲ್ಲಿ ಬಂಡವಾಳವನ್ನು ಹಿಂತೆಗೆದುಕೊಂಡು ಪುನಶ್ಚೇತನಗೊಳಿಸಿ ಲಾಭದಾಯಕದತ್ತ ಕೊಂಡೊಯ್ಯಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, `ಕಲಬುರಗಿಯ ಸಿಮೆಂಟ್ ಕಾರ್ಪೊರೇಷನ್, ಮೈಶುಗರ್, ಮೈಸೂರು ಪೇಪರ್ ಮಿಲ್ಸ್ ಸೇರಿದಂತೆ ಹಲವಾರು ನಿಗಮಗಳು ಮತ್ತು ಸಂಸ್ಥೆಗಳು ನಷ್ಟದ ಹಾದಿಯಲ್ಲಿವೆ. ತಾವು ಎರಡು ದಿನಗಳ ಹಿಂದೆ ದಿಲ್ಲಿಗೆ ಭೇಟಿ ನೀಡಿದ ವೇಳೆ ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ನಡೆಸಿ ಇವುಗಳನ್ನು ಯಾವ ರೀತಿ ಪುನಶ್ಚೇತನ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. 

`ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಕೈಗಾರಿಕೆಗಳನ್ನು ಮುಚ್ಚಲು ಅವಕಾಶ ನೀಡುವುದಿಲ್ಲ. ಸಾಧ್ಯವಾದಷ್ಟು ಕೈಗಾರಿಕೆಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ರಾಜ್ಯದಲ್ಲಿರುವ ಎಲ್ಲ ನೈಸರ್ಗಿಕ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು ಕೈಗಾರಿಕಾ ಉದ್ಯೋಗ ಕ್ರಾಂತಿ ಸೃಷ್ಟಿಸುವ ಗುರಿ ಹೊಂದಲಾಗಿದೆ' ಎಂದು ಅವರು ಮಾಹಿತಿ ನೀಡಿದರು. 

`ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಮೂಲಕ ಜಮೀನನ್ನು ಉದ್ಯಮಿಗಳು ಯಾವ ಕಾರಣಕ್ಕೆ ಪಡೆದಿದ್ದಾರೋ ಅದೇ ಉದ್ದೇಶಕ್ಕೆ ಬಳಸಬೇಕು. ಒಂದು ವೇಳೆ ಇದರ ಬಗ್ಗೆ ಎಲ್ಲಿಯಾದರೂ ದುರುಪಯೋಗವಾಗಿದ್ದರೆ ಸಮೀಕ್ಷೆ ನಡೆಸಲು ಸೂಚನೆ ನೀಡಿದ್ದೇನೆ. ಕೆಐಎಡಿಬಿಯಿಂದ ಪಡೆದುಕೊಂಡಿರುವ ಜಮೀನನ್ನು ಯಾವುದೇ ಕಾರಣಕ್ಕೂ ಬೇರೆ ಉದ್ದೇಶಕ್ಕೆ ಬಳಸಲು ಅವಕಾಶವಿಲ್ಲ. ಅದನ್ನು ನಾವು ಸೇಲ್ ಡೀಡ್ ಮಾಡಿರುವುದಿಲ್ಲ. ಒಂದು ವೇಳೆ ಅನ್ಯ ಕಾರಣಗಳಿಗೆ ಜಮೀನನ್ನು ಬಳಸಿಕೊಂಡಿದ್ದರೆ ತನಿಖೆಗೆ ಆದೇಶಿಸುತ್ತೇನೆ' ಎಂದು ನಿರಾಣಿ ಎಚ್ಚರಿಸಿದರು.

`ಮುಂದಿನ ದಿನಗಳಲ್ಲಿ ಉತ್ತಮವಾದ ಕೈಗಾರಿಕಾ ವಾತಾವರಣ ಮೂಡಿಸುವ ಸಂಬಂಧ ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಕೋಲಾರ ಜಿಲ್ಲೆ ಕೆಜಿಎಫ್ ಬಳಿ 3 ಸಾವಿರಕ್ಕೂ ಹೆಚ್ಚು ಎಕರೆ ಜಮೀನು ಇದೆ. ಈ ಹಿಂದೆ ಇಲ್ಲಿ ಹೆಚ್ಚಿನ ಪ್ರಮಾಣದ ಬಂಗಾರ  ಚಿನ್ನ ಸಿಗುತ್ತಿತ್ತು. ಒಂದು ಟನ್ ಗಣಿಗಾರಿಕೆಗೆ 40 ಗ್ರಾಂ ಚಿನ್ನ ಸಿಗುತ್ತಿತ್ತು. ಈಗ ಅದರ ಪ್ರಮಾಣ ಕಡಿಮೆಯಾಗಿದೆ ಎಂದರು.

ಸುಮಾರು 3,200 ಎಕರೆ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಇಲ್ಲ ಎಂದು ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡಿದ್ದಾರೆ. ಹೀಗಾಗಿ ಜಮೀನನ್ನು ನಮಗೆ ನೀಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಬಂದಿದೆ. ಕೈಗಾರಿಕೆ ಬಳಕೆಗೆ ನೀಡಿದರೆ ನಾವು ಕೈಗಾರಿಕಾ ಟೌನ್‍ಶಿಪ್ ಮಾಡಲಿದ್ದೇವೆ ಎಂದು ಅವರು ಪ್ರಕಟಿಸಿದರು.

`ಈ ಹಿಂದೆ ನಾನು ಕೈಗಾರಿಕಾ ಸಚಿವನಾಗಿದ್ದ ವೇಳೆ ಉತ್ತಮವಾದ ಕೆಲಸ ಮಾಡಿದ್ದೇನೆ. ದೇಶದಲ್ಲೇ ಮೊದಲ ಬಾರಿಗೆ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗಿತ್ತು. ಸುಮಾರು 11.8ಲಕ್ಷ ಕೋಟಿ ರೂ.ಬಂಡವಾಳವನ್ನು ಹೂಡಲಾಗಿತ್ತು. ಇದರಿಂದ 15 ಲಕ್ಷ ವಿದ್ಯಾವಂತ ಯುವಕರಿಗೆ ಉದ್ಯೋಗ ನೀಡಲಾಗಿದೆ. ಮೊದಲ ಬಾರಿಗೆ ಲ್ಯಾಂಡ್ ಬ್ಯಾಂಕ್ ಸ್ಥಾಪಿಸಿ ಕೃಷಿಗೆ ಯೋಗ್ಯವಲ್ಲದ ಜಮೀನನ್ನು ವಶಪಡಿಸಿಕೊಂಡು ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತಿದ್ದೇವೆ. ಸುಮಾರು 1.25 ಲಕ್ಷ ಪರಿಹಾರವನ್ನು ನೀಡಲಾಗುತ್ತಿತ್ತು. ಇದರ ಪರಿಣಾಮ ಉದ್ದಿಮೆದಾರರಿಗೆ ಸುಲಭವಾಗಿ ಬಂಡವಾಳ ಹೂಡಿಕೆ ಮಾಡಲು ಅನುಕೂಲವಾಯಿತು ಎಂದು ಅವರು ಅಭಿಪ್ರಾಯಪಟ್ಟರು. 

ಜಿಲ್ಲಾ ಮಟ್ಟದಲ್ಲಿ ಕೈಗಾರಿಕಾ ಅದಾಲತ್‍ಗಳನ್ನು ನಡೆಸಲಾಗುವುದು. ನಮ್ಮ ಸರಕಾರ ಉದ್ದಿಮೆದಾರರ ಮನೆಬಾಗಿಲಿಗೆ ಹೋಗಲಿದೆ. ಉದ್ದಿಮೆಯಾಗಿ ಉದ್ಯೋಗ ಎಂಬ ಕೈಗನ್ನಡಿಯೊಂದಿಗೆ ಐಟಿಐ, ಬಿಎ, ಬಿಕಾಂ, ಬಿಎಸ್ಸಿ, ಎಂಸ್ಸಿ, ಎಂಕಾಂ, ಪಿಎಚ್‍ಡಿ ವಿದ್ಯಾವಂತರಿಗೆ ಉದ್ಯೋಗ ನೀಡುವುದೇ ನನ್ನ ಮೊದಲ ಗುರಿ. ಕೇಂದ್ರ ಸರಕಾರವು `ಇನ್ವೆಸ್ಟ್ ಇಂಡಿಯ' ಎಂಬ ವಿನೂತನ ಯೋಜನೆಯನ್ನು ಆರಂಭಿಸಿದೆ. ದೇಶ, ವಿದೇಶಗಳಿಂದ ಬಂಡವಾಳ ಹೂಡಿಕೆ ಮಾಡಲು ಬರುವವರಿಗೆ ಇಲ್ಲಿ ಸಮಗ್ರವಾದ ಮಾಹಿತಿಯನ್ನು ನೀಡಲಾಗುತ್ತದೆ. ರಾಜ್ಯದಿಂದಲೂ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದರು.

`ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳು, ಇಲ್ಲಿನ ಮೂಲಭೂತ ಸೌಕರ್ಯ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಒದಗಿಸಲಾಗುವುದು. ಕರ್ನಾಟಕ ಇನ್ವೆಸ್ಟ್ ಇಂಡಿಯಾದಲ್ಲಿ ಪಾಲುದಾರ ರಾಜ್ಯವಾಗಿದೆ ಎಂದ ಅವರು, ಮೈಸೂರು ಲ್ಯಾಂಪ್ಸ್ ಬಳಿ 21 ಎಕರೆ ಜಾಗವಿದ್ದು, ಅಲ್ಲಿ ಥೀಮ್‍ಪಾರ್ಕ್ ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗಿದ್ದು, ಇದೇ 19ರಂದು ಭೂಮಿ ಪೂಜೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಎನ್‍ಜಿಎಫ್‍ನಲ್ಲಿ ಜಮೀನಿದ್ದು, ಅಲ್ಲಿ ಪಾರ್ಕ್ ಮಾಡುವ ಉದ್ದೇಶವಿದೆ ಎಂದು ಹೇಳಿದರು.

ಉಳಿದ 20 ತಿಂಗಳ ಅವಧಿಯಲ್ಲಿ ಉತ್ತಮ ಕೆಲಸ ಮಾಡುತ್ತೇವೆ. ಗುಡಿ ಕೈಗಾರಿಕೆಯಿಂದ ಬೃಹತ್ ಕೈಗಾರಿಕೆವರೆಗೆ ಹೆಚ್ಚು ಆದ್ಯತೆ ಕೊಡಲಾಗುತ್ತದೆ. ಪ್ರಧಾನಿ ಮೋದಿ ಅವರು ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ. ಸ್ಟಾರ್ಟಆಪ್‍ಗಳಿಗೆ ಉತ್ತೇಜನ ನೀಡಿದ್ದಾರೆ. ಅದೇ ನಿಟ್ಟಿನಲ್ಲಿ ನಾವು ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸುತ್ತೇವೆ' ಎಂದು ಮುರುಗೇಶ್ ಆರ್.ನಿರಾಣಿ ಶಪಥ ಮಾಡಿದರು. 

ಹೂಡಿಕೆದಾರರ ಸಮಾವೇಶ ಮುಂದೂಡಿಕೆ?

`ರಾಜ್ಯದಲ್ಲಿ ಕೋವಿಡ್ ಕಾರಣ ಬಹುನಿರೀಕ್ಷಿತ ಬಂಡವಾಳದಾರರ ಸಮಾವೇಶ ಮುಂದೂಡುವ ಸಾಧ್ಯತೆಗಳಿವೆ. ಈಗಾಗಲೇ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಆರು ತಿಂಗಳ ಅವಧಿಯಲ್ಲಿ ಯಶಸ್ವಿಯಾಗಿ ಮಾಡಲು ಆಗುತ್ತದೆಯೋ ಇಲ್ಲವೋ? ಗೊತ್ತಿಲ್ಲ. ಈ ಸಂಬಂಧ ಸದ್ಯದಲ್ಲೇ ಸಿಎಂ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು'

-ಮುರುಗೇಶ್ ಆರ್.ನಿರಾಣಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top