ಧ್ವಜಾರೋಹಣ ಸಂದರ್ಭ ದುರಂತ; ವಿದ್ಯಾರ್ಥಿ ಸಾವಿನ ಸುದ್ದಿ ಆಘಾತಕಾರಿ : ಸಚಿವ ನಾಗೇಶ್ ಪ್ರತಿಕ್ರಿಯೆ
ತುಮಕೂರು: ಜಿಲ್ಲೆಯ ಕರೀಕೆರೆ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವ ವೇಳೆ ವಿದ್ಯುತ್ ಸ್ಪರ್ಶದಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಸುದ್ದಿ ತಿಳಿದು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಈ ಸುದ್ದಿ ಅತ್ಯಂತ ಆಘಾತಕಾರಿ ಎಂದಿದ್ದಾರೆ.
ಚಂದನ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದು, ಜೊತೆಗೆ ಪವನ್ ಮತ್ತು ಶಶಾಂಕ್ ಎಂಬ ಇನ್ನೂ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯ ಗೊಂಡಿದ್ದಾರೆ ಎಂದು ತಿಳಿಯಿತು. ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನನ್ನ ತೀವ್ರ ಸಂತಾಪ ಗಳನ್ನು ತಿಳಿಸಲು ಬಯಸುತ್ತೇನೆ. ಅವರ ದುಃಖ ಶಬ್ದಗಳಿಂದ ಶಮನ ಮಾಡಲು ಸಾಧ್ಯವಿಲ್ಲ. ಗಾಯಗೊಂಡ ವಿದ್ಯಾರ್ಥಿಗಳ ಚಿಕಿತ್ಸೆಗೆ ಕೂಡಲೇ ಬೇಕಾದ ಎಲ್ಲ ಸೌಲಭ್ಯ ಒದಗಿಸುವಂತೆ ತಿಳಿಸಿದ್ದೇನೆ. ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ತನಿಖೆ ನಡೆಸಲು ಸೂಚಿಸುತ್ತೇನೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.
Next Story