ಕನ್ನಡ ಕಾಯಕ ಕೃತಿ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಆ.19: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಕಟಿಸಿರುವ ರಾಜ್ಯ ಸರಕಾರದ ಕನ್ನಡ ಕಾಯಕ ಕೃತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಲೋಕಾರ್ಪಣೆ ಮಾಡಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕೃತಿಯ ಸಂಪಾದಕ ರಾ.ನಂ.ಚಂದ್ರಶೇಖರ್, ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ.ರವಿಶಂಕರ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story