ಮಂಡ್ಯ: ಬಾಲಕಿಯ ಅತ್ಯಾಚಾರ ಆರೋಪ; ವೃದ್ಧನ ಬಂಧನ
ಮಂಡ್ಯ, ಆ.20: ಅಪ್ರಾಪ್ತ ಬಾಲಕಿ ಅತ್ಯಾಚಾರವೆಸಗಿದ ಆರೋಪದ ಮೇಲೆ 60 ವರ್ಷದ ವೃದ್ಧನನ್ನು ಮದ್ದೂರು ಪೊಲೀಸರು ಬಂಧಿಸಿ ಪೊಸ್ಕೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.
ಮದ್ದೂರು ತಾಲೂಕಿನ ಚಂದಹಳ್ಳಿದೊಡ್ಡಿ ಗ್ರಾಮದ ವೃದ್ಧ ಬಂಧಿತ ಆರೋಪಿ. ಈತ ಅದೇ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ತಿಂಡಿಕೊಡಿಸುವುದಾಗಿ ಪುಸಲಾಯಿಸಿ ಮನೆಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ.
ಬಾಲಕಿಯನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದ್ದು, ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವನಿ ಗುರುವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿ ಮತ್ತು ಕುಟುಂಬದವರಿಗೆ ಸಾಂತ್ವನ ಹೇಳಿದರು.
Next Story