Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧ...

ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧ ದೊರಕಲು ಸೊಸೈಟಿ ಸ್ಥಾಪನೆಗೆ ಚಿಂತನೆ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ23 Aug 2021 8:53 PM IST
share
ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧ ದೊರಕಲು ಸೊಸೈಟಿ ಸ್ಥಾಪನೆಗೆ ಚಿಂತನೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಆ. 23: `ಕ್ಯಾನ್ಸರ್ ಪೀಡಿತರಿಗೆ ಔಷಧಿಯ ವೆಚ್ಚ ಭರಿಸಲು ಅನುಕೂಲವಾಗುವಂತೆ ಕೇಂದ್ರ ಸರಕಾರದ ಸಹಯೋಗದಲ್ಲಿ ಕನಿಷ್ಠ ದರದಲ್ಲಿ ಚಿಕಿತ್ಸೆ ಕೊಡುವ ವ್ಯವಸ್ಥೆ ಕಲ್ಪಿಸಲು ಸೊಸೈಟಿಯನ್ನು ಸ್ಥಾಪನೆ ಮಾಡಲು ಸರಕಾರ ಚಿಂತನೆ ನಡೆಸಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸೋಮವಾರ ನಗರದ ಕಿದ್ವಾಯಿ ಸ್ಮಾರಕಗಂಥಿ ಸಂಸ್ಥೆ, ಕ್ಯಾನ್ಸರ್ ಸಂಶೊಧನಾ ಮತ್ತು ತರಬೇತಿ ಕೇಂದ್ರದಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಿಸಿರುವ ಒಪಿಡಿ ಬ್ಲಾಕ್ ಹಾಗೂ ಇತರೆ ಸೌಲಭ್ಯಗಳ ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದ ಅವರು, `ಸಿಎಸ್‍ಆರ್ ಹಾಗೂ ಸರಕಾರದ ನಿಧಿಯನ್ನು ಬಳಸಿ ಸೊಸೈಟಿಯ ಮೂಲಕ ರೋಗಿಗಳ ಆರೈಕೆಯಲ್ಲಿರುವ ಅವರ ಕುಟುಂಬದವರಿಗೆ ಅಗತ್ಯವಿರುವ ಅನುಕೂಲವನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು' ಎಂದರು.

`ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಆವಿಷ್ಕಾರಗಳ ಬಳಕೆಗೆ ಒತ್ತು ನೀಡಲಾಗುವುದು. ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಕಿದ್ವಾಯಿ ಸಂಸ್ಥೆ, ಜಗತ್ತಿನ ಎಲ್ಲ ಉತ್ತಮ ವೈದ್ಯಕೀಯ ಸಂಸ್ಥೆಗಳೊಂದಿಗೆ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ತೊಡಗಬೇಕು' ಎಂದು ಸಲಹೆ ನೀಡಿದ ಅವರು, ಇನ್ಫೋಸಿಸ್ ಪ್ರತಿಷ್ಠಾನ ರಾಜ್ಯದ ಅನೇಕ ಆಸ್ಪತ್ರೆಗಳಿಗೆ ಹಾಗೂ ಶಾಲಾ, ಕಾಲೇಜುಗಳಿಗೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದಾರೆ. `ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ' ಎಂಬ ಸರ್ವಜ್ಞನ ಮಾತನ್ನು ಪ್ರತಿಷ್ಠಾನದ ವತಿಯಿಂದ ಅಕ್ಷರಶಃ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರು ಪಾಲಿಸಿಕೊಂಡು ಬಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

`ಕ್ಯಾನ್ಸರ್ ಜೊತೆ ಹೋರಾಟ ಮಾಡುವಾಗ ಮಾನವೀಯತೆಯನ್ನು ಉಳಿಸಿಕೊಳ್ಳಬೇಕು. ಬಡ ರೋಗಿಗಳಿಗೆ ಸಹಾಯಕ್ಕೆ ಇನ್ನಷ್ಟು ದಾನಿಗಳು ಮುಂದೆ ಬರಬೇಕು. ನಾಡಿಗೆ ಹೃದಯವಿರುವ ಶ್ರೀಮಂತರ ಅಗತ್ಯವಿದೆ. ಒಬ್ಬರಿಗೊಬ್ಬರ ಪ್ರೇರಣೆಯಿಂದ ಜಗತ್ತು ನಡೆಯುತ್ತಿದೆ. ಒಳ್ಳೆಯ ಕೆಲಸ ಮಾಡಿದಾಗ ಮರೆಯದೆ ಮೆಲಕು ಹಾಕಬೇಕು. ಈ ಬಗ್ಗೆ ಚಿಂತನೆ ಮಾಡಿದಾಗ ಶಕ್ತಿ ತುಂಬಿ ಇನ್ನಷ್ಟು ದೊಡ್ಡ ಕೆಲಸ ಮಾಡಲು ಪ್ರೇರಣೆ ದೊರೆಯುತ್ತದೆ' ಎಂದರು. 

ತಮ್ಮ ತಾಯಿಗೆ ಕ್ಯಾನ್ಸರ್ ಪೀಡಿತರಾಗಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಮುಖ್ಯಮಂತ್ರಿ, `ಕ್ಯಾನ್ಸರ್ ಚಿಕಿತ್ಸೆಯೇ ಸಮಸ್ಯೆ ಎನ್ನುವಂಥ ಕಾಲವಿತ್ತು. ಸಂಶೋಧನೆಯ ಫಲವಾಗಿ ಚಿಕಿತ್ಸೆಯಲ್ಲಿ ಈಗ ಸಾಕಷ್ಟು ಸುಧಾರಣೆಯಾಗಿದೆ. ಕಾಯಿಲೆಗೆ ಒಳಗಾದವರು ಮಾನಸಿಕ ಒತ್ತಡ ಬಹಳವಿರುತ್ತದೆ. ಕಿದ್ವಾಯಿ ಸಂಸ್ಥೆ ನಾಲ್ಕು ದಶಕಗಳಿಂದ ಅಸ್ತಿತ್ವದಲ್ಲಿದ್ದು, ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಶ್ರದ್ಧೆಯಿಂದ ಕೆಲಸ ಮಾಡಿದ್ದು, ಅವರೆಲ್ಲರ ಸೇವೆ ಅಮೋಘವಾಗಿದೆ ಎಂದು ಶ್ಲಾಘಿಸಿದರಲ್ಲದೆ ಇಂಥ ಸೇವೆ ಮಾಡುವ ಸಂಸ್ಥೆಗೆ ನಮ್ಮ ಸರಕಾರದ ಬೆಂಬಲ ಸದಾ ಇರುತ್ತದೆ ಎಂದರು.

ಕಲಬುರಗಿ, ಶಿವಮೊಗ್ಗ, ಮೈಸೂರಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳಿದ್ದು, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಕ್ಯಾನ್ಸರ್ ಆಸ್ಪತ್ರೆ ತೆರೆಯಲು ಹಾಗೂ ಪ್ರಾದೇಶಿಕವಾರು ಕ್ಯಾನ್ಸರ್ ಆಸ್ಪತ್ರೆಗಳನ್ನು ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರೋಗ್ಯ ಸಚಿವ ಡಾ.ಕೆ.ಸಧಾಕರ್, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ ಹಾಗೂ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X