ಘಟ್ಟದ್ದಳ್ಳದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿ
ಮಡಿಕೇರಿ: ಕಾಡಾನೆ ದಾಳಿಗೆ ಕಾರ್ಮಿಕ ಬಲಿಯಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ವ್ಯಾಪ್ತಿಯ ಘಟ್ಟದ್ದಳ್ಳದಲ್ಲಿ ನಡೆದಿದೆ.
ಕಾರ್ಮಿಕ ಕರಿಯ (53) ಎಂಬವರೇ ಮೃತ ವ್ಯಕ್ತಿ. ಅಂಗಡಿಗೆ ಹೋಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ.
ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಡಾನೆ ಹಾವಳಿ ತಡೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.
Next Story