ಡಿವೈಡರ್ ಗೆ ಕಾರು ಢಿಕ್ಕಿ: ಮಗು ಸಹಿತ ಇಬ್ಬರು ಮೃತ್ಯು
ದಾವಣಗೆರೆ: ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಮಗು ಸಹಿತ ಇಬ್ಬರು ಸಾವನಪ್ಪಿರುವ ದಾರುಣ ಘಟನೆ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ವೀಣಾ(32) ವೈಷ್ಣವಿ(6) ಮೃತ ದುರ್ದೈವಿಗಳು. ಮೃತರನ್ನು ಧಾರವಾಡದ ಜಯನಗರದ ನಿವಾಸಿಗಳೆಂದು ಗುರುತಿಸಲಾಗಿದ್ದು, ಧಾರವಾಡ ದಿಂದ ಬೆಂಗಳೂರಿಗೆ ತೆರಳುತ್ತಿರುವಾಗ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಡಿಕ್ಕಿಯಾದ ರಭಸಕ್ಕೆ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವವರಿಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡಿದಿದ್ದು, ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story