ಮೈಸೂರು: ನರ್ಸಿಂಗ್ ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ
ಮೈಸೂರು,ಸೆ.3: ನಗರದ ಆರ್.ಎಸ್.ನಾಯ್ಡು ನಗರದ ಹೋಲಿ ಕ್ರಾಸ್ ಸ್ಟಡಿ ಹೌಸ್ನಲ್ಲಿದ್ದ ನರ್ಸಿಂಗ್ ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ವಿಚಾರ ತಿಳಿಯುತ್ತಿದ್ದಂತೆ ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನಾಯ್ಸು ನಗರದ ಹೋಲಿ ಕ್ರಾಸ್ ಹೌಸ್ನಲ್ಲಿದ್ದ ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದ, ಘಟನೆ ಸಂಬಂಧ ತನಿಖೆ ಆರಂಭಿಸಿದ ಪೊಲೀಸರು ಸ್ಥಳದಲ್ಲಿದ್ದ ಸಿಸಿ ಟಿವಿ ಫೊಟೇಜ್ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.
ಘಟನಾ ಸ್ಥಳಕೆಕ ಡಿಸಿಪಿ ಪ್ರದೀಪ್ ಗಂಟಿ ಭೇಟಿ ನೀಡಿ ಪರಿಶೀಲಿಸಿದರು. ನಂತರ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ಮಾಹಿತಿ ಸಂಗ್ರಹಿಸಿದ ಪೊಲೀಸರು ತಕ್ಷಣ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story