ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ
ಬೆಂಗಳೂರು, ಸೆ. 4: ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ಕರಾವಳಿ, ಮಲೆನಾಡು ಭಾಗಗಳಲ್ಲಿ ಸೆ.5 ಮತ್ತು 6ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧೆಡೆ ಮುಂಗಾರು ಮಳೆ ಚುರುಕುಗೊಂಡಿದೆ. ವಾಯುಭಾರ ಸ್ಥಿತಿ ಮುಂದುವರಿದಿರುವ ಕಾರಣದಿಂದ, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಮಳೆ ಇನ್ನೂ ಕೆಲ ದಿನಗಳ ಕಾಲ ಮುಂದುವರಿಯಲಿದೆ. ಕರಾವಳಿ ಭಾಗ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
Next Story