ವಿಜಯಪುರದಲ್ಲಿ ಭೂಕಂಪನದ ಅನುಭವ; ಆತಂಕಗೊಂಡ ಜನರು
ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಬಹುತೇಕ ಭಾಗಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಆತಂಕಗೊಂಡ ಜನರು ತಮ್ಮ ಮನೆಗಳಿಂದ ಹೊರ ಬಂದಿದ್ದಾರೆ.
ಶನಿವಾರ ತಡ ರಾತ್ರಿ :11:47 ಮತ್ತು 11:48ರ ಸುಮಾರಿಗೆ ಎರಡು ಬಾರಿ ಭೂಕಂಪನ ಅನುಭವವಾಗಿದ್ದು, ನಗರದ ಬಹುತೇಕ ಭಾಗಗಳಲ್ಲಿ ಭೂಕಂಪನದ ಅನುಭವ ಆಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಜಿಲ್ಲೆಯ ಹಲವು ಭಾಗಗಳಲ್ಲಿ ಕಳೆದ ಹಲವು ದಿನಗಳಿಂದ ಭೂ ಕಂಪನದ ಅನುಭವ ಆಗುತ್ತಿದೆ, ಈ ಬಗ್ಗೆ ಸರಕಾರ ನಿಖರ ಅಧ್ಯಯನ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Next Story