ಆಗುಂಬೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಆಕಸ್ಮಿಕ; ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು
ಹೊತ್ತಿ ಉರಿಯುತ್ತಿರುವ ಕಾರು
ಶಿವಮೊಗ್ಗ(ಸೆ.19): ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಆಗುಂಬೆಯ ಘಾಟಿಯ ಮೊದಲ ತಿರುವಿನಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರ್ಕಳದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರು ಆಗುಂಬೆಯ ಮೊದಲ ತಿರುವಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಶಿವಮೊಗ್ಗದ ಅರವಿಂದ್ ಎಂಬುವವರು ಕಾರ್ಕಳದಲ್ಲಿ ಕಾರು ಖರೀದಿಸಿ ಅದೇ ಕಾರಿನಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಕಾರಿನಲ್ಲಿದ್ದ ಅರವಿಂದ್ ಸೇರಿ ಇತರ ಮೂವರು ಪ್ರಯಾಣಿಕರು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಇಳಿದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇನ್ನು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ಸಂಚಾರ ಬಂದ್ ಆಗಿತ್ತು.ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story