-

ಭಾಷಣ ವೇಳೆ ಕನ್ನಡದ ಬಾವುಟ ಪ್ರದರ್ಶಿಸಿದ ಜೆಡಿಎಸ್ ಶಾಸಕ

ಸದೃಢ ಪ್ರಜಾಪ್ರಭುತ್ವಕ್ಕಾಗಿ ವ್ಯವಸ್ಥೆಯಲ್ಲಿ ಜನರ ನಂಬಿಕೆ ಉಳಿಸಿಕೊಳ್ಳುವುದು ಮುಖ್ಯ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

-

ಬೆಂಗಳೂರು, ಸೆ.24: ಸದೃಢ ಪ್ರಜಾಪ್ರಭುತ್ವಕ್ಕಾಗಿ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ. ಜನಪ್ರತಿನಿಧಿಗಳು ತಮ್ಮ ನಡವಳಿಕೆಯ ಮೂಲಕ ತಮ್ಮನ್ನು ತಾವು ಪ್ಯಾರಾಗಾನ್‍ಗಳೆಂದು ಪ್ರಸ್ತುತಪಡಿಸಿಕೊಂಡಾಗ ಮಾತ್ರ ಇದನ್ನು ಸಾಧಿಸಬಹುದು. ಇದು ಪ್ರಜಾಪ್ರಭುತ್ವದಲ್ಲಿ ಜನರ ವಿಶ್ವಾಸವನ್ನು ಗಳಿಸಲು ನೆರವಾಗುತ್ತದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಪಜ್ರಾಪ್ರಭುತ್ವ: ಸಂಸದೀಯ ಮೌಲ್ಯಗಳ ರಕ್ಷಣೆ’ ಕುರಿತು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ವಿಧಾನಸೌಧದಲ್ಲಿನ ವಿಧಾನಸಭೆಯಲ್ಲಿ ಅವರು ಭಾಷಣ ಮಾಡಿದರು.

ಇಂದು ಭಾರತವು ಪರಿವರ್ತನೆಯ ಹಂತವನ್ನು ಎದುರಿಸುತ್ತಿದೆ. ‘ಆಝಾದಿ ಕಾ ಅಮೃತ್ ಮಹೋತ್ಸವ’ದ ಸಮಯದಲ್ಲಿ ಈ ದೇಶದ ಪ್ರತಿಯೊಂದು ವರ್ಗದ ಜನ ಸಮುದಾಯವೂ ನವ ಭಾರತ ನಿರ್ಮಾಣದಲ್ಲಿ ಭಾಗವಹಿಸಲು ಬಯಸುತ್ತದೆ. ಶಾಸಕಾಂಗಗಳನ್ನು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಬಲಪಡಿಸುವುದು ನಮ್ಮ ಸಂಕಲ್ಪವಾಗಿದೆ. ಅರ್ಥಪೂರ್ಣ ಚರ್ಚೆಗಳು ಮತ್ತು ಸಂವಾದಗಳ ಮೂಲಕ ನಾವು ಜನರ ಆಶಯಗಳನ್ನು ಮತ್ತು ನಿರೀಕ್ಷೆಗಳನ್ನು ಪೂರೈಸಬೇಕು. ಇದರಿಂದ ನಾವು ಪ್ರಜಾಪ್ರಭುತ್ವದ ಮುಂಚೂಣಿಯಲ್ಲಿರುವುದನ್ನು ಕುರಿತು ಜಗತ್ತಿಗೆ ಮಾರ್ಗದರ್ಶನ ನೀಡಬಹುದು ಎಂದು ಅವರು ತಿಳಿಸಿದರು.

ನಾವು ನಮ್ಮ ದೇಶದಲ್ಲಿ ಸಂಸದೀಯ ವ್ಯವಸ್ಥೆಯನ್ನು ಬಹುಪಕ್ಷೀಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ. ವಿಭಿನ್ನ ಸಿದ್ಧಾಂತಗಳು ಮತ್ತು ವೈವಿಧ್ಯತೆಗಳ ದೇಶವಾಗಿದ್ದರೂ, ನಾವು ಪ್ರಜಾಪ್ರಭುತ್ವ ಸಂಸ್ಥೆಗಳ ಮೂಲಕ ರಾಜ್ಯ ಮತ್ತು ದೇಶದ ಜನರ ಸೇವೆಯಲ್ಲಿ ಸಾಮೂಹಿಕವಾಗಿ ಕೆಲಸ ಮಾಡಲು ಸಾಧ್ಯವಾಗಿದೆ ಎಂದು ಓಂ ಬಿರ್ಲಾ ಹೇಳಿದರು.

ಪ್ರಜಾಪ್ರಭುತ್ವ ಸಂಸ್ಥೆಗಳ ಮೂಲಕ ರಾಜ್ಯ ಮತ್ತು ದೇಶದ ಸಮೃದ್ಧಿ ಮತ್ತು ಅಭಿವೃದ್ಧಿಗಾಗಿ ಸಾಮೂಹಿಕವಾಗಿ ಕೆಲಸ ಮಾಡಬೇಕು. ಇದರಿಂದ ನಾವು ರಾಜ್ಯ ಮತ್ತು ದೇಶದ ಜನರ ಬದುಕಿನಲ್ಲಿ, ಶಾಂತಿ, ಸಮೃದ್ಧಿ ಮತ್ತು ಸಂತೋಷವನ್ನು ತರಬಹುದು ಮತ್ತು ಸಾಮಾಜಿಕ ಮತ್ತು ಆರ್ಥಿಕ ಉನ್ನತಿಯನ್ನು ತರಬಹುದು ಎಂದು ಅವರು ತಿಳಿಸಿದರು. 

ಸಂಸದೀಯ ಪ್ರಜಾಪ್ರಭುತ್ವವನ್ನು ಅತ್ಯುತ್ತಮ ಆಡಳಿತದ ರೂಪವೆಂದು ಸಾರ್ವತ್ರಿಕವಾಗಿ ಒಪ್ಪಿಕೊಳ್ಳಲಾಗಿದೆ. ಈ ಸನ್ನಿವೇಶದಲ್ಲಿ ನಾವು ಸಂಸದೀಯ ಪ್ರಜಾಪ್ರಭುತ್ವ ಮತ್ತು ಶಾಸಕಾಂಗವನ್ನು ಬಲಪಡಿಸಿದ್ದೇವೆ ಮತ್ತು ಆಡಳಿತದ ವಿವಿಧ ಆಯಾಮಗಳಲ್ಲಿ ಪ್ರಗತಿ ಸಾಧಿಸಿದ್ದೇವೆ. ನಮ್ಮ ಪಜ್ರಾಪ್ರಭುತ್ವ ಯಾವಾಗಲೂ ಜನ ಕೇಂದ್ರೀತವಾಗಿದೆ. ಇದರ ನಿರ್ಮಾತೃಗಳು ಸಂವಿಧಾನವನ್ನು ರೂಪಿಸುವಾಗ ಜನರ ಹಿತಾಸಕ್ತಿಯನ್ನು ಮುಖ್ಯವಾಗಿ ಗಮನದಲ್ಲಿ ಇಟ್ಟುಕೊಂಡಿದ್ದರು ಎಂದು ಅವರು ಸ್ಮರಿಸಿದರು.

ಈ ಕಾರಣದಿಂದಲೆ ಇದುವರೆಗೆ ದೇಶದಲ್ಲಿ 17 ಸಾರ್ವತ್ರಿಕ ಚುನಾವಣೆಗಳು ಮತ್ತು 300ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳು ಯಶಸ್ವಿಯಾಗಿ ನಡೆದಿವೆ. ಮತದಾರರ ಭಾಗವಹಿಸುವಿಕೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಚುನಾವಣೆ ನಂತರ ಅಧಿಕಾರದ ವರ್ಗಾವಣೆ ಅತ್ಯಂತ ಸರಳವಾಗಿ ನಡೆಯುತ್ತಿದೆ. ಇದಕ್ಕೆ ಕಾರಣ ಪ್ರಜಾಪ್ರಭುತ್ವದ ಬಗೆಗಿನ ನಮ್ಮ ಬದ್ಧತೆಯಾಗಿದೆ. ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿರುವಾಗ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಜನರಿಗೆ ಇನ್ನಷ್ಟು ಉತ್ತರದಾಯಿನ್ನಾಗಿ ಮಾಡುವುದು ಹೇಗೆ ಎಂದು ನಾವು ಪರಿಶೀಲಿಸಬೇಕಾಗಿದೆ ಎಂದು ಅವರು ಕರೆ ನೀಡಿದರು.

ಆಡಳಿತವು ಜನರ ಭಾವನೆಗಳು ಮತ್ತು ಆಕಾಂಕ್ಷೆಗಳೊಂದಿಗೆ ಹೊಂದಿಕೆಯಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ಅವಶ್ಯಕತೆಯಿದೆ. ಸಂಸದೀಯ ಪ್ರಜಾಪ್ರಭುತ್ವವು ಚುನಾಯಿತ ಪ್ರತಿನಿಧಿಗಳ ಜವಾಬ್ದಾರಿಯನ್ನು ಆಧರಿಸಿದೆ. ಚುನಾಯಿತ ಪ್ರತಿನಿಧಿಗಳು ಜನರ ಆಶಯಗಳು ಮತ್ತು ಆಕಾಂಕ್ಷೆಗಳಿಗೆ ಸಂವೇದನಾಶೀಲರಾದಾಗ ಮತ್ತು ಶಾಸಕಾಂಗಗಳ ಮೂಲಕ ಅವುಗಳನ್ನು ಪೂರೈಸಲು ಶ್ರಮಿಸಿದಾಗ ಮಾತ್ರ ಸಂಸತ್ತು ಮತ್ತು ಶಾಸಕಾಂಗದ ಪ್ರತಿಷ್ಠೆಯನ್ನು ಹೆಚ್ಚಿಸಬಹುದು ಎಂದು ಓಂ ಬಿರ್ಲಾ ಹೇಳಿದರು.

ಶಾಸಕಾಂಗ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಜನರ ಕುಂದುಕೊರತೆಗಳಿಗೆ ಧ್ವನಿ ನೀಡಲು ವಿವಿಧ ದೃಷ್ಟಿಕೋನಗಳಲ್ಲಿ ಕೆಲಸ ಮಾಡುತ್ತಿವೆ. ಮತ್ತು ಕಾರ್ಯಾಂಗದ ಜವಾಬ್ದಾರಿಯನ್ನು ಸರಿಪಡಿಸಲು ಬಹುವಿಧದ ಆಯಾಮದಲ್ಲಿ ಕೆಲಸ ಮಾಡುತ್ತಿವೆ. ಇಂತಹ ಗುರುತರವಾದ ಜವಾಬ್ದಾರಿಗಳನ್ನು ಪೂರೈಸಲು, ಶಾಸಕಾಂಗದ ಸದಸ್ಯರು ಪ್ರಜಾಪ್ರಭುತ್ವದ ತತ್ವಗಳು ಮತ್ತು ಮೌಲ್ಯಗಳನ್ನು ಶ್ರದ್ಧೆಯಿಂದ ಪಾಲಿಸಬೇಕು ಮತ್ತು ಈ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಜನರಿಗೆ ಹೆಚ್ಚು ಪಾರದರ್ಶಕ ಮತ್ತು ಉತ್ತರದಾಯಕವಾಗಿ ಮಾಡುವಂತೆ ನೋಡಿಕೊಳ್ಳಬೇಕು ಎಂದು ಲೋಕಸಭಾ ಸ್ಪೀಕರ್ ತಿಳಿಸಿದರು.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಅಧಿಕಾರಗಳು ಮತ್ತು ಕರ್ತವ್ಯಗಳನ್ನು ಸಂವಿಧಾನದಲ್ಲಿ ನಿರ್ದಿಷ್ಟಪಡಿಸಲಾಗಿದೆ ಮತ್ತು ಅವುಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ. ಆದಾಗ್ಯೂ, ಈ ಮೂರರಲ್ಲಿ ಶಾಸಕಾಂಗವು ಪ್ರಮುಖ ಪಾತ್ರವನ್ನು ಹೊಂದಿದೆ ಏಕೆಂದರೆ ಇದು ಜನರ ನೀರಿಕ್ಷೆಗಳಿಗೆ ಅನುಗುಣವಾಗಿ ಕಾನೂನುಗಳನ್ನು ರೂಪಿಸುವ ಸಂಸ್ಥೆಯಾಗಿದೆ ಎಂದು ಅವರು ಹೇಳಿದರು.

ಕಾನೂನುಗಳ ಸಮಗ್ರ ಚರ್ಚೆ ಅಗತ್ಯ: ನಾವು ರೂಪಿಸುವ ಕಾನೂನಿನ ಬಗ್ಗೆ ಸಮಗ್ರ ಚರ್ಚೆ ಮತ್ತು ಚಿಂತನ ಮಂಥನ ನಡೆಸಬೇಕಾದುದು ನಮ್ಮ ಜವಾಬ್ದಾರಿಯಾಗಿದೆ. ಈ ಪ್ರಕ್ರಿಯೆಯಲ್ಲಿ ಶಾಸಕರ ಸಕ್ರಿಯ ಭಾಗವಹಿಸುವಿಕೆ ಇರಬೇಕು. ಅಂತಿಮವಾಗಿ ಕಾನೂನು ರೂಪುಗೊಂಡ ಮೇಲೆ ಯಾರೂ ಇದರ ಬಗ್ಗೆ ಬೆರಳೆತ್ತಿ ನಮ್ಮತ್ತ ತೋರುವಂತಿರಬಾರದು. ಶಾಸಕರ ಸಾಮಥ್ರ್ಯ ಮತ್ತು ಕೌಶಲ್ಯವನ್ನು ಹೆಚ್ಚಿಸಲು ಶಾಸಕಾಂಗಗಳು ಸಮಗ್ರ ಸಾಮಥ್ರ್ಯ ವೃದ್ಧಿ ಕ್ರಿಯಾ ಯೋಜನೆಯನ್ನು ರೂಪಿಸಬೇಕು ಎಂದು ಓಂ ಬಿರ್ಲಾ ತಿಳಿಸಿದರು.

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ, ಬಸವಣ್ಣ 12ನೆ ಶತಮಾನದಲ್ಲಿ ನಿರ್ಮಿಸಿದ ‘ಅನುಭವ ಮಂಟಪ’ ಪ್ರಸ್ತುತ ಸಂದರ್ಭದಲ್ಲಿ ಜನಪ್ರತಿನಿಧಿಗಳ ಸಂಸತ್ತಿನ ಪ್ರತಿಬಿಂಬವಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಮಹಾನ್ ತ್ಯಾಗವು ನಮಗೆ ಸ್ಫೂರ್ತಿ ನೀಡುತ್ತಲೆ ಇದೆ ಎಂದು ಅವರು ಹೇಳಿದರು.

ಕರ್ನಾಟಕ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಜಂಟಿ ಸಭೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಇಲ್ಲಿನ ವಿಧಾನಸೌಧ ಕಟ್ಟಡವು ಪ್ರಜಾಪ್ರಭುತ್ವದ ಒಂದು ವಿಶಿಷ್ಟ ಸಂಕೇತವಾಗಿದ್ದು, ಅದು ಜನರ ಆಶಯಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಈ ಐತಿಹಾಸಿಕ ಕಟ್ಟಡ ಮತ್ತು ಪ್ರಜಾಪ್ರಭುತ್ವದೊಂದಿಗಿನ ಅದರ ಸುದೀರ್ಘ ಪ್ರಯಾಣವು ನಮಗೆ ಹೊಸ ಸ್ಪೂರ್ತಿಯನ್ನು ನೀಡುತ್ತದೆ ಎಂದು ಓಂ ಬಿರ್ಲಾ ಹೇಳಿದರು

ರಾಷ್ಟ್ರಪತಿ ಹಾಗೂ ರಾಜ್ಯಪಾಲರನ್ನು ಹೊರತುಪಡಿಸಿ ರಾಜ್ಯ ವಿಧಾನಸಭೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದರು.

ಜೆಡಿಎಸ್ ಶಾಸಕ ಅನ್ನದಾನಿ ಪ್ರತಿಭಟನೆ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ಹಿಂದಿಯಲ್ಲಿ ಭಾಷಣ ಆರಂಭಿಸುತ್ತಿದ್ದಂತೆ ಕನ್ನಡದ ಬಾವುಟ ಪ್ರದರ್ಶಿಸಿ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ ಪ್ರತಿಭಟಿಸಿದರು. ಕನ್ನಡದ ನೆಲದಲ್ಲಿ ಕನ್ನಡವೇ ಸಾರ್ವಭೌಮ, ಕನ್ನಡದಲ್ಲಿ ಭಾಷಣ ಮಾಡಬೇಕು ಎಂದು ಕೂಗಿದರು.

ನೂತನ ಸಂಸತ್ ಭವನ(ಸೆಂಟ್ರಲ್ ವಿಸ್ತಾ)ದ ಸಂಕೀರ್ಣದಲ್ಲಿನ ಯಾವುದಾದರೂ ಒಂದು ಕಟ್ಟಡಕ್ಕೆ ಅನುಭವ ಮಂಟಪ ಎಂದು ನಾಮಕರಣ ಮಾಡುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top