ಶಿಕ್ಷಕರ ವರ್ಗಾವಣೆ: ಅಭಿಮತ ಸಂಗ್ರಹಕ್ಕೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ
ಬೆಂಗಳೂರು, ಸೆ.25: ಶಿಕ್ಷಕರು ತಮ್ಮ ಸೇವಾವಧಿಯಲ್ಲಿ ಒಂದು ಬಾರಿ ಅವರು ಬಯಸುವ ಜಿಲ್ಲೆಗೆ ಹಂತಹಂತವಾಗಿ ವರ್ಗಾಯಿಸುವ ಬಗ್ಗೆ ಶಿಕ್ಷಕರ ಅಭಿಮತ ಕ್ರೋಡೀಕರಿಸಬೇಕು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಓ) ಶಿಕ್ಷಕರ ಅಭಿಪ್ರಾಯಗಳನ್ನು ಪಡೆದು ವರದಿ ನೀಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚಿಸಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಸಚಿವರಿಗೆ ಪತ್ರ ಬರೆದು ಮನವಿ ಮಾಡಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಈಗಾಗಲೇ ಆಯ್ದ ಶಿಕ್ಷಕರು ಮತ್ತು ಶಿಕ್ಷಕರ ಪ್ರತಿನಿಧಿ ಸಂಘಟನೆಗಳ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಈ ಸಂಬಂಧ ಶೀಘ್ರದಲ್ಲಿಯೇ ವರದಿ ತಯಾರಿಸಿ ಇಲಾಖೆಗೆ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.
Next Story