ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ. 26: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು, ಸೆ.28ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಯಾಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಧಾರವಾಡ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಹಾಸನ, ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ.10ರಷ್ಟು ಮಳೆಯಾಗಿತ್ತು. ಜುಲೈ ಮತ್ತು ಆಗಸ್ಟ್ ತಿಂಗಳಿನಿಂದ ಮಳೆ ಕೊರತೆ ಕಂಡು ಬಂದಿದೆ. ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Next Story