ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಭೂಮಿ ನಡುಗಿದ ಅನುಭವ
ವಿಜಯಪುರ: ಜಿಲ್ಲೆಯ ಸಿಂದಗಿಯಲ್ಲಿ ಭೂಮಿ ನಡುಗಿದ ಅನುಭವವಾಗಿದೆ. ಸಿಂದಗಿ ತಾಲ್ಲೂಕಿನಲ್ಲಿ 3 ಬಾರಿ ಭಾರೀ ಪ್ರಮಾಣದ ಸದ್ದು ಕೇಳಿದೆ. ಇದರಿಂದ ಮಧ್ಯರಾತ್ರಿ ಜನತೆ ಮನೆಯಿಂದ ಆಚೆಗೆ ಓಡಿ ಬಂದಿದ್ದಾರೆ.
ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಮತ್ತಿತರ ಕಡೆಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಭೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Next Story