ರಾಜ್ಯದ ಹಲವೆಡೆ ಅ.12ರವರೆಗೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ
ಬೆಂಗಳೂರು, ಅ.10: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಅ.12ರವರೆಗೆ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅ.11ರಂದು ಕರಾವಳಿ 3 ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ನಂತರ ಅ.13ರಂದು ಮತ್ತೆ ಮುಂಗಾರು ಮಳೆ ಚುರುಕಾಗಲಿದ್ದು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜ ನಗರ, ರಾಯಚೂರು, ಬೀದರ್, ಯಾದಗಿರಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆ ಸುರಿಯುವ ಸಾಧ್ಯತೆಯಿದೆ. ಅಂದು ಕಲಬುರಗಿಗೆ ಆರೆಂಜ್ ಅಲರ್ಟ್ ಹಾಗೂ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Next Story