ಕಲ್ಲಿದ್ದಲು ಕೊರತೆ ಹಿನ್ನೆಲೆ, ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ
ಬೆಂಗಳೂರು, ಅ.12: ಕಲ್ಲಿದ್ದಲು ಕೊರತೆಯಾಗುತ್ತಿರುವುದರಿಂದ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿ ಪೊನ್ನುರಾಜ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕಿ ಮಂಜುಳಾ ಸೇರಿದಂತೆ ಸರಕಾರದ ಹಾಗೂ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story