ವಿಜಯಪುರ: ಭೀಕರ ರಸ್ತೆ ಅಪಘಾತಕ್ಕೆ ಮಗು ಸಹಿತ ನಾಲ್ವರು ಬಲಿ
ವಿಜಯಪುರ, ಅ.20: ನಿಂತಿದ್ದ ಲಾರಿಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿರುವುದು ವರದಿಯಾಗಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ವಿಜಯಪುರ ನಗರದ ಮೂಲದ ಮಹಿಳೆ, ಮಗು ಸಹಿತ ಮೂವರು ಹಾಗೂ ಲಾರಿ ಚಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಉಳಿದಂತೆ ಕಾರಿನಲ್ಲಿದ್ದ ಮೂವರು ಗಾಯಗೊಂಡಿರುವುದು ವರದಿಯಾಗಿದೆ. ಮೃತರ ಬಗ್ಗೆ ಹೆಚ್ಚಿನ ವಿವರ ತಿಳಿದುಬಂದಿಲ್ಲ.
ಈ ಬಗ್ಗೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story