ಕಲಬುರಗಿ: ಇಬ್ಬರು ಹೆಣ್ಣು ಮಕ್ಕಳನ್ನು ಬಾವಿಗೆಸೆದು ತಾಯಿ ಆತ್ಮಹತ್ಯೆ
ಕಲಬುರಗಿ, ಅ.24: ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲೂಕಿನ ಮಾಡ್ಕಾಳ್ ಗ್ರಾಮದಲ್ಲಿ ರವಿವಾರ ಬೆಳಗ್ಗೆ ನಡೆದಿದೆ.
ತಾಯಿ ಲಕ್ಷ್ಮೀ ಏಳಕೆ, ಮಕ್ಕಳಾದ ಗೌರಮ್ಮ(6), ಸಾವಿತ್ರಿ (1) ಮೃತಪಟ್ಟಿದ್ದಾರೆ, ಘಟನೆಯಲ್ಲಿ 4 ವರ್ಷದ ಈಶ್ವರಿ ಎಂಬ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಮೂವರು ಹೆಣ್ಣು ಮಕ್ಕಳಿರುವ ಕಾರಣಕ್ಕೆ ಪತಿ ಮತ್ತು ಮನೆಯವರು ಸೇರಿಕೊಂಡು ಲಕ್ಷ್ಮೀಗೆ ಕಿರುಕುಳ ಕೊಡುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಕಿರುಕುಳದಿಂದ ಬೇಸತ್ತು ಗ್ರಾಮದ ಹೊರವಲಯದ ಜಮೀನುವೊಂದರ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ನಿಂಬರ್ಗಾ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Next Story