ಸರಕಾರವನ್ನು ನಾಲಾಯಕ್‌ ಎಂದ ಎಂಇಎಸ್‌ ಪುಂಡರಿಗೆ ತಕ್ಕ ಶಾಸ್ತಿ ಮಾಡಿ: ಕುಮಾರಸ್ವಾಮಿ ಆಗ್ರಹ | Vartha Bharati- ವಾರ್ತಾ ಭಾರತಿ

--

ಬೆಳಗಾವಿಯಲ್ಲಿ ಕನ್ನಡಕ್ಕೆ ಅಪಮಾನ

ಸರಕಾರವನ್ನು ನಾಲಾಯಕ್‌ ಎಂದ ಎಂಇಎಸ್‌ ಪುಂಡರಿಗೆ ತಕ್ಕ ಶಾಸ್ತಿ ಮಾಡಿ: ಕುಮಾರಸ್ವಾಮಿ ಆಗ್ರಹ

ಬೆಂಗಳೂರು, ಅ.27: ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್ʼಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕುಂದಾ ನಗರಿಯ ಪ್ರತಿಷ್ಠೆಗೆ ಧಕ್ಕೆ ತಂದು ಅಲ್ಲಿನ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿರುವ ಎಂಇಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರ ಟ್ವೀಟ್ʼನ ಪೂರ್ಣ ಪಾಠ ಇಲ್ಲಿದೆ;

ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ.

ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ಎಂಇಎಸ್ ವಿನಾಕಾರಣ ಕೆಣಕುತ್ತಿದೆ. ಪ್ರತಿಭಟನೆಯ ವೇಳೆ ಕರ್ನಾಟಕ ಸರಕಾರವನ್ನು ಎಂಇಎಸ್ ಪುಂಡರು ಗೇಲಿ ಮಾಡಿದ್ದಾರೆ.

ಅಲ್ಲಿನ ಸರಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲೇ ಕೊಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಕರ್ನಾಟಕ ಸರಕಾರವನ್ನು ʼನಾಲಾಯಕ್ʼ ಎಂದು ಕರೆದು ʼಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಖಂಡನೀಯ.

ರಾಜಕೀಯವಾಗಿ ಮೂಲೆಗುಂಪಾಗಿರುವ ಎಂಇಎಸ್, ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗಿದೆ.

ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ನಾನು ಸರಕಾರವನ್ನು ಒತ್ತಾಯ ಮಾಡುತ್ತೇನೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top