ಶಿವಮೊಗ್ಗ: ರಾಜ್ಯೋತ್ಸವ ನಿಮಿತ್ತ ವಿವಿಧೆಡೆ ಕನ್ನಡದ ಕಂಪು ಸಾರಿದ ಗೀತಗಾಯನ | Vartha Bharati- ವಾರ್ತಾ ಭಾರತಿ

--

ರಾಜ್ಯಾದ್ಯಂತ ಏಕಕಾಲದಲ್ಲಿ ಮೊಳಗಿದ ಕನ್ನಡ ಕಲರವ

ಶಿವಮೊಗ್ಗ: ರಾಜ್ಯೋತ್ಸವ ನಿಮಿತ್ತ ವಿವಿಧೆಡೆ ಕನ್ನಡದ ಕಂಪು ಸಾರಿದ ಗೀತಗಾಯನ

ಶಿವಮೊಗ್ಗ, ಅ.28: ‘ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ’....... ‘ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆರೆ ಬಳುಕಿನಲ್ಲಿ’....... ಹಾಗೂ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’.....  ಗೀತೆಗಳ ಗಾಯನವು ಜಿಲ್ಲಾದ್ಯಂತ ಮಾರ್ದನಿಸಿ, ಕೇಳುಗರ ಕಿವಿಗೆ ತಂಪನ್ನೀಯುವ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ’ಮಾತಾಡ್ ಮಾತಾಡ್ ಕನ್ನಡ’ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ  ಗುರುವಾರ ಜಿಲ್ಲಾಡಳಿತದ ಆವರಣ, ಶಿವಪ್ಪನಾಯಕ ಮಾರುಕಟ್ಟೆಯ ಆವರಣ, ಸಿಮ್ಸ್ ಆವರಣ, ಇತರೆ ಶಾಲಾ-ಕಾಲೇಜುಗಳ ಆವರಣ, ಸಂಘ ಸಂಸ್ಥೆಗಳು ಸೇರಿದಂತೆ ಜಿಲ್ಲೆಯ ವಿವಿಧೆಡೆ ಏಕಕಾಲದಲ್ಲಿ ಈ ಕನ್ನಡ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಷ್ಟ್ರಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ನಿತೋತ್ಸವ ಕವಿ ನಿಸಾರ್ ಅಹ್ಮದ್‌ರವರ ಜೋಗದ ಸಿರಿ ಬೆಳಕಿನಲ್ಲಿ ಮತ್ತು ಹಂಸಲೇಖರವರ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಗೀತೆಗಳನ್ನು ಆಯ್ಕೆ ಮಾಡಿ ಜಿಲ್ಲಾಡಳಿತ ಆವರಣದಲ್ಲಿ ಅರುಣ್‌ಕಮಾರ್ ಮತ್ತು ತಂಡ, ಶಿವಪ್ಪನಾಯಕ ಮಾರುಕಟ್ಟೆ(ಬೇರಿಸ್ ಮಾಲ್) ಆವರಣದಲ್ಲಿ ಭದ್ರಾವತಿ ವಾಸು ಮತ್ತು ತಂಡ, ಸಿಮ್ಸ್ ಆವರಣದಲ್ಲಿ ಶುಭಾ.ಸಿ.ಎಸ್. ಮತ್ತು ತಂಡದೊಂದಿಗೆ ಸ್ಥಳೀಯ ಗಾಯಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ದನಿಗೂಡಿಸಿದರು.

ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಎಡಿಸಿ ನಾಗೇಂದ್ರ ಹೊನ್ನಳ್ಳಿ, ತಹಶೀಲ್ದಾರ್ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಗಾಯನಕ್ಕೆ ದನಿಗೂಡಿಸಿದರು. ಇದೇ ಸಂದರ್ಭದಲ್ಲಿ ಎಡಿಸಿ ನಾಗೇಂದ್ರ ಹೊನ್ನಳ್ಳಿರವರು ಕನ್ನಡ ಸಂಕಲ್ಪ ಪ್ರತಿಜ್ಞಾ ವಿಧಿ ಬೋಧಿಸಿದರು.

 ಪಾಲಿಕೆ ಸಹಯೋಗದಲ್ಲಿ ಶಿವಪ್ಪನಾಯಕ ಮಾರುಕಟ್ಟೆ ಆವರಣದಲ್ಲಿ ಆಯೋಜಿಸಿದ್ದ ಗೀತಗಾಯನದಲ್ಲಿ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಸುಗಮ ಸಂಗೀತ ಪರಿಷತ್ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾರ್ಗದರ್ಶನ ಮತ್ತು ಇತರೆ ಇಲಾಖೆಗಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮವು ಶಿಷ್ಟಾಚಾರದಂತೆ ನಾಡಗೀತೆಯೊಂದಿಗೆ ಆರಂಭವಾಗಿ, ಸರ್ಕಾರ ನಿಗದಿಪಡಿಸಿದ ೦೩ ಕನ್ನಡ ಗೀತೆಗಳ ಗಾಯನದ ನಂತರ ಮುಕ್ತಾಯವಾಯಿತು. ಕಾರ್ಯಕ್ರಮದಲ್ಲಿ ಗಾಯಕರು ಧರಿಸಿದ್ದ ಬಿಳಿ ಉಡುಪು ಹಾಗೂ ಸಮೂಹ ಗಾಯನ ಎಲ್ಲರ ಗಮನ ಸೆಳೆಯಿತು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top