ನ.29ರಿಂದ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಗಳು ಆರಂಭ; ವೇಳಾಪಟ್ಟಿ ಪ್ರಕಟ
ಬೆಂಗಳೂರು, ನ.12: ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿಯ ಮಧ್ಯವಾರ್ಷಿಕ ಪರೀಕ್ಷೆಗಳನ್ನು ರಾಜ್ಯದಾದ್ಯಂತ ಇದೇ ನ.29 ರಿಂದ ಡಿ.10ವರೆಗೂ ಏಕಕಾಲದಲ್ಲಿ ನಡೆಸಲು ತೀರ್ಮಾನಿಸಿದೆ.
ಈ ಕುರಿತು ವೇಳಪಟ್ಟಿಯನ್ನು ಅಂತರ್ಜಾಲದಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ pue.kar.in ನಲ್ಲಿ ನೋಡಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story