Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ...

ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ16 Nov 2021 5:18 PM IST
share
ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಪುನೀತ್​ ರಾಜ್​ಕುಮಾರ್​ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. 

ನಗರದಲ್ಲಿ ನಡೆಯುತ್ತಿರುವ ‘ಪುನೀತ ನಮನ' ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆ ಮಾಡಿದ್ದು, 'ಪುನೀತ್​ ಅವರನ್ನು ನಾನು ಬಾಲ್ಯದಿಂದ ಬಲ್ಲೆ, ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

ಚಿಕ್ಕವಯಸ್ಸಿನಲ್ಲಿಯೇ ಸಾಧನೆಯ ಶಿಖರ ಏರಿದ ಪುನೀತ್: ಅಪ್ಪು ನನಗೆ ಆತ್ಮೀಯ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ, ಕರ್ನಾಟಕ ಇತಿಹಾಸದಲ್ಲಿ ಬಾಲನಟನಾಗಿ ರಾಷ್ಟ್ರಪ್ರಶಸ್ತಿ ಪಡೆದ ಏಕಮೇವ ನಟ. ತಂದೆಯೊಂದಿಗೆ ನಟಿಸುವಾಗ ತಂದೆ ಮಗನ ಸಂಬಂಧ ಮೀರಿ ಅಪ್ಪು ಪಾತ್ರದಲ್ಲಿ ಲೀನವಾಗುತ್ತಿದ್ದ ಪರಿ ಅದ್ಭುತವಾದುದು ಎಂದು ಮುಖ್ಯಮಂತ್ರಿ ಸ್ಮರಿಸಿದರು.

ತಮ್ಮ ನಟನೆಯಿಂದ ಅಭಿಮಾನಿಗಳನ್ನು ಸೂಜಿಗಲ್ಲಿನಂತೆ ಆಕರ್ಷಣೆ ಮಾಡುತ್ತಿದ್ದ ಪವರ್ ಸ್ಟಾರ್ ಪುನೀತ್‍ರ ವಿನಯಭರಿತ ನಡೆ, ನುಡಿಯಲ್ಲಿ ಡಾ.ರಾಜ್‍ರವರನ್ನು ಕಾಣಬಹುದು. ‘ಶರಣರನ್ನು ಮರಣದಲ್ಲಿ ನೋಡು’ ಎನ್ನುವಂತೆ ಪುನೀತ್‍ರ ಅಗಲಿಕೆಗೆ ಅಭಿಮಾನಿಗಳು ಸ್ಪಂದಿಸಿದ ರೀತಿ ಪುನೀತ್‍ರ ಮೇರು ವ್ಯಕ್ತಿತ್ವವನ್ನು ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ದೇಶಕ್ಕೆ ಅಗಾಧವಾದ ಚಾರಿತ್ರಿಕ ಹಿನ್ನೆಲೆ ಇದೆ. ಚಾರಿತ್ರ್ಯ ಇರುವವರು ಕಡಿಮೆ. ಅಪ್ಪು ಚಾರಿತ್ರ್ಯವಂತನಾಗಿ ಚರಿತ್ರೆಗೆ ಸೇರಿದ್ದಾರೆ ಎಂದು ಬಣ್ಣಿಸಿದ ಮುಖ್ಯಮಂತ್ರಿ, ಅಂತಿಮ ದರ್ಶನದ ಸಂದರ್ಭದಲ್ಲಿ ತಾವು ಅಪ್ಪುವಿಗೆ ಮುತ್ತು ನೀಡಿದ ಕುರಿತು ಹಲವಾರು ಜನ ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಆದರೆ ಆ ಮುತ್ತನ್ನು ನಾನು ಹೃದಯದಿಂದ ನೀಡಿದ್ದೇನೆ. ಮುತ್ತುರಾಜನ ಮುತ್ತಿಗೆ ನಾನು ರಾಜ್ಯದ ಆರೂವರೆ ಕೋಟಿ ಜನರ ಪರವಾಗಿ ಮುತ್ತು ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ಪುನೀತ್ ರಾಜ್‍ಕುಮಾರ್ ಅಂತ್ಯಕ್ರಿಯೆಯನ್ನು ಸುಸೂತ್ರವಾಗಿ ನಡೆಸಲು ಸಹಕರಿಸಿದ ರಾಜ್‍ಕುಟುಂಬ, ಅಭಿಮಾನಿಗಳು ಹಾಗೂ ಸರಕಾರದ ಇಲಾಖೆಗಳಿಗೆ ಮುಖ್ಯಮಂತ್ರಿ ಅಭಿನಂದನೆ ಸಲ್ಲಿಸಿದರು.

ಪುನೀತ್ ನಮನ ಕಾರ್ಯಕ್ರಮದಲ್ಲಿ ಅವರ ಕುಟುಂಬ ಸದಸ್ಯರು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಸಂಸದರು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

"ಕನ್ನಡನಾಡಿನ ಜನಪ್ರಿಯ ಕಲಾವಿದ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ" : ಮುಖ್ಯಮಂತ್ರಿ @BSBommai.#PuneethRajkumar

— CM of Karnataka (@CMofKarnataka) November 16, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X