ಯಾರನ್ನೋ ಮೆಚ್ಚಿಸಲಿಕ್ಕೆ ನಾನು ಗ್ರಾಮ ವಾಸ್ತವ್ಯ ಮಾಡಲಿಲ್ಲ: ಕುಮಾರಸ್ವಾಮಿ
ಹಂಸಲೇಖ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಆಗಿದ್ದಾಗ ನಾನು ಮಾಡಿದ ಗ್ರಾಮ ವಾಸ್ತವ್ಯಕ್ಕೆ ಮಹಾತ್ಮ ಗಾಂಧೀಜಿ ಅವರೇ ಸ್ಪೂರ್ತಿ ಮತ್ತು ಆದರ್ಶ. ಗ್ರಾಮ ವಾಸ್ತವ್ಯ ಅನ್ನೋದು ನಾಟಕೀಯವಾಗಿ ಮಾಡಿಲ್ಲ. ಆತ್ಮತೃಪ್ತಿಗಾಗಿ, ಜನರ ಕೆಲಸ ಮಾಡುವುದಕ್ಕೆ ನಾನು ಆ ಕಾರ್ಯಕ್ರಮ ಮಾಡಿದ್ದು ಎಂದರು.
ಪೇಜಾವರ ಶ್ರೀಗಳ ಬಗ್ಗೆ ಹಾಗೂ ತಮ್ಮ ಗ್ರಾಮ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ,ನನ್ನ ಗ್ರಾಮ ವಾಸ್ತವ್ಯದಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸಲಿಕ್ಕೆ ನಾನು ಗ್ರಾಮ ವಾಸ್ತವ್ಯ ಮಾಡಲಿಲ್ಲ ಎಂದ ಅವರು, ಆ ವಿಚಾರಗಳ ಬಗ್ಗೆ ಚರ್ಚೆ ಮಾತನಾಡುವುದು ಅಗತ್ಯ ಇರಲಿಲ್ಲ. ಮುಖ್ಯವಾಗಿ ಧರ್ಮ ಹಾಗೂ ಧಾರ್ಮಿಕ ಗುರುಗಳ ಬಗ್ಗೆ ಹೀಗೆ ಮಾತನಾಡುವುದು ಸರಿಯಲ್ಲ ಎಂದರು.
Next Story