ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪ ಪುನರುಚ್ಛರಿಸೋಣ: ಸಿಎಂ ಬೊಮ್ಮಾಯಿ
ಬೆಂಗಳೂರು: 'ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪ ಪುನರುಚ್ಛರಿಸೋಣ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಟ್ವೀಟ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯ ತಿಳಿಸಿದ್ದಾರೆ. 1949ರ ನ.26ರಂದು ಭಾರತದ ಸಂವಿಧಾನ ಅಂಗೀಕಾರವಾಯ್ತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢ ನಿಶ್ಚಯದೊಂದಿಗೆ ಕರ್ತೃಗಳನ್ನು ಸ್ಮರಿಸೋಣ. ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ. ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪ ಪುನರುಚ್ಛರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
"1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢನಿಶ್ಚಯದೊಂದಿಗೆ ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ, ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಪುನರುಚ್ಛರಿಸೋಣ" : ಮುಖ್ಯಮಂತ್ರಿ @BSBommai.#SamvidhanDiwas pic.twitter.com/NZRG4k0Adc
— CM of Karnataka (@CMofKarnataka) November 26, 2021