ಬಾಲಕಿಯ ಅತ್ಯಾಚಾರ ಆರೋಪ: 70 ವರ್ಷದ ವೃದ್ಧ ವಶಕ್ಕೆ
ಸಾಂದರ್ಭಿಕ ಚಿತ್ರ
ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ 70 ವರ್ಷದ ವೃದ್ಧನನ್ನು ಅಫಜಲಪುರ ತಾಲೂಕಿನ ರೇವೂರ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವೃದ್ಧ ಮತ್ತು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ನ.29ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಪಕ್ಕದ ಮನೆಯ 70 ವರ್ಷದ ವೃದ್ಧ ತಿಂಡಿ ಕೊಡಿಸುವುದಾಗಿ ಆಮಿಷ ಒಡ್ಡಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಂದು ವೃದ್ಧನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Next Story