ಸಿಎಂ ಬದಲಾವಣೆ ವಿಚಾರ ವರಿಷ್ಠರ ಮುಂದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಫೈಲ್ ಚಿತ್ರ - (ಪ್ರಹ್ಲಾದ್ ಜೋಶಿ)
ಹುಬ್ಬಳ್ಳಿ, ಡಿ. 5: ‘ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ಯಾವುದೇ ಬಿಜೆಪಿ ವರಿಷ್ಟರ ಮುಂದೆ ಇಲ್ಲ' ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಣೆ ನೀಡಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಚಿವ ಮುರುಗೇಶ್ ಆರ್.ನಿರಾಣಿ ಈಗಲೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿಲ್ಲ. ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಷ ಅಷ್ಟೇ. ಯಾರೂ ಆ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ' ಎಂದು ಆಕ್ಷೇಪಿಸಿದರು.
‘ಜೆಡಿಎಸ್ ವರಿಷ್ಟ ಎಚ್.ಡಿ. ದೇವೇಗೌಡ, ಪ್ರಧಾನಿ ಮೋದಿ ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಕೀಯ ಕಾರಣಕ್ಕಾಗಿ ಉಭಯ ನಾಯಕರು ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಪ್ರಹ್ಲಾದ್ ಜೋಶಿ, ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಕುರಿತು ನನಗೆ ಮಾಹಿತಿ ಇಲ್ಲ ಎಂದು ವಿವರಣೆ ನೀಡಿದರು.
Next Story