ಮಡಿಕೇರಿಯಲ್ಲಿ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಅಂತರ್ ರಾಷ್ಟ್ರೀಯ ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಉದ್ಘಾಟಿಸಿದರು.
ಪೊಲೀಸ್ ಇಲಾಖೆ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಪೋಲಿಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ, ವೃತ್ತ ಕಚೇರಿ, ಡಿವೈ.ಎಸ್.ಪಿ. ಕಚೇರಿ, ಜಿಲ್ಲಾ ಸಶಸ್ತ್ರದಳ ಮತ್ತು ಇತರೆ ಘಟಕಗಳ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ದಿನದ 24 ಗಂಟೆಯೂ ಹಗಲಿರುಳೆನ್ನದೆ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಮತ್ತು ಅವರ ಕುಟುಂಬದ ಒತ್ತಡ ನಿವಾರಣೆ, ಮಾನಸಿಕ ಸ್ಥೈರ್ಯ ಹಾಗು ಜೀವನೋಲ್ಲಾಸವನ್ನು ಹೆಚ್ಚಿಸುವ ಪ್ರಯತ್ನವಾಗಿ ಪ್ರತಿವರ್ಷವೂ ಪೊಲೀಸ್ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ.
Next Story