ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು, ಡಿ.7: ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಶಿಕಲಾ ಜೊಲ್ಲೆ ಅವರಿಗೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಕೊಟ್ಟಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತು ವಕೀಲ ಜಿ. ಬಾಲಾಜಿ ನಾಯ್ಡು ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿದಾರರ ಕೋರಿಕೆ: ಆಡಳಿತಾತ್ಮಕ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆ ನಿಗದಿಪಡಿಸಿ ತನಿಖೆಗೆ ಆದೇಶಿಸಬೇಕು ಮತ್ತು ಅಗತ್ಯ ಕ್ರಮ ಜರುಗಿಸಲು ಸರಕಾರಕ್ಕೆ ನಿರ್ದೇಶಿಸಬೇಕು. ಈ ಕುರಿತು ವರದಿ ನೀಡುವಂತೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
Next Story