ಬಣಕಲ್: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನ
ಸಾಂದರ್ಭಿಕ ಚಿತ್ರ (source: PTI)
ಕೊಟ್ಟಿಗೆಹಾರ, ಡಿ.8: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯವಾದ ಘಟನೆ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಸಂಬಂಧ ಆರೋಪಿ ಕೋಳೂರು ಗ್ರಾಮದ ನಾರಾಯಣ ಎಂಬಾತನನ್ನು ಬಂಧಿಸಿರುವ ಬಣಕಲ್ ಪೊಲೀಸರು ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಬಾಲಕಿಯ ತಾಯಿ ಈ ಬಗ್ಗೆ ಬಣಕಲ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೋಲಿಸರು ಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧೀಸಿ ತನಿಖೆ ಕೈಗೊಂಡಿದ್ದಾರೆ.
Next Story