ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಡಿ.15ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು, ಡಿ.12: ಸೈಕ್ಲೋನಿಕ್ ಚಂಡಮಾರುತಗಳ ಪ್ರಭಾವದಿಂದ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿ.15ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಜೂನ್ ಹಾಗೂ ಜುಲೈ ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರೀ ವರ್ಷಧಾರೆಯಾಗಿತ್ತು. ಜುಲೈ ತಿಂಗಳಲ್ಲಿ ಬಿದ್ದ ಮಳೆಯ ವೇಳೆ ನದಿ, ಹಳ್ಳಕೊಳ್ಳ, ಕೆರೆಗಳು ಉಕ್ಕಿ ಹರಿದಿದ್ದವು. ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿತ್ತು. ಜನಜೀವನ ಅಸ್ತವ್ಯಸ್ತವಾಗಿತ್ತು. ಆಗಸ್ಟ್ ಮೊದಲ ವಾರದಲ್ಲಿಯೂ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆಯಾಗಿತ್ತು. ನಂತರ ಅಬ್ಬರ ಕಡಿಮೆಯಾಗಿತ್ತು.
Next Story