ವಿಧಾನ ಪರಿಷತ್ ಚುನಾವಣೆ: ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣಗೆ ಗೆಲುವು
ಜೆಡಿಎಸ್ ವಿಜೇತ ಅಭ್ಯರ್ಥಿ ಡಾ.ಸೂರಜ್ ರೇವಣ್ಣ
ಹಾಸನ: ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.
ಮಾಜಿ ಸಚಿವ ಎಚ್.ಡಿ ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ, 2247 ಮತಗಳನ್ನು ಪಡೆದುಕೊಂಡಿದ್ದು, 1523 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಇಲ್ಲಿ ಕಾಂಗ್ರೆಸ್ ನ ಎ.ಶಂಕರ್ 714 ಹಾಗೂ ಬಿಜೆಪಿಯ ಎಜ್. ಎಂ ವಿಶ್ವನಾಥ್ 435 ಮತಗಳನ್ನು ಪಡೆದುಕೊಂಡಿದ್ದಾರೆ.
Next Story