ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಕುರಿತು ಚರ್ಚೆ: ಸಚಿವ ಡಾ.ಅಶ್ವತ್ಥ ನಾರಾಯಣ

-

ಬೆಂಗಳೂರು, ಜ.1: ಸರಕಾರವು ಅತಿಥಿ ಉಪನ್ಯಾಸಕರ ಪರವಾಗಿಯೇ ಇದ್ದು, ಅವರ ವೇತನವನ್ನು ಹೆಚ್ಚಿಸುವ ಬಗ್ಗೆ ಚರ್ಚಿಸುತ್ತಿದೆ. ಸಂಬಂಧಿತ ಸಮಿತಿಯ ವರದಿ ಬಂದ ಕೂಡಲೇ ಸಾಧ್ಯವಿರುವ ಎಲ್ಲ ಪರಿಹಾರ ಕ್ರಮಗಳನ್ನೂ ತೆಗೆದುಕೊಳ್ಳಲಾಗುವುದು. ತಕ್ಷಣ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ಅತಿಥಿ ಉಪನ್ಯಾಸಕರನ್ನು ನೇರವಾಗಿ ಖಾಯಂ ಮಾಡುವುದು ಸಾಧ್ಯವಿಲ್ಲ. ಇದಕ್ಕೆ ಉಮಾದೇವಿ ಪ್ರಕರಣದ ತೀರ್ಪು ಅಡಚಣೆಯಾಗಿದೆ. ಆದರೂ ನಾವು ಅತಿಥಿ ಉಪನ್ಯಾಸಕರಿಗೆ ಕೊರೋನ ಸಮಯದಲ್ಲೂ ವೇತನ ಕೊಟ್ಟಿದ್ದೇವೆ. ಮುಷ್ಕರನಿರತ ಉಪನ್ಯಾಸಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. 

ಸರಕಾರಿ ಕಾಲೇಜುಗಳಲ್ಲಿ ಕಡಿಮೆ ಉಪನ್ಯಾಸಕರು ಇದ್ದ ಕಾರಣಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗಿದೆ. ಆದರೆ ಇವರು ಸರಕಾರದ ಗಮನಕ್ಕೆ ತಾರದೆಯೇ ಮುಷ್ಕರಕ್ಕೆ ಇಳಿದಿರುವುದು ಸರಿಯಲ್ಲ ಎಂದು ಅಶ್ವತ್ಥ ನಾರಾಯಣ ಬೇಸರ ವ್ಯಕ್ತಪಡಿಸಿದರು. 

ಮೇಕೆದಾಟು-ಕಾಂಗ್ರೆಸ್ ನಾಟಕ: ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ನಾಟಕವಾಡುತ್ತಿದೆ. ಅದು ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯು ಈ ನಾಟಕದ ಒಂದು ಭಾಗವಷ್ಟೇ ಎಂದು ಅಶ್ವತ್ಥ ನಾರಾಯಣ ಲೇವಡಿ ಮಾಡಿದರು. 

ನೀರಾವರಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಣಿತರಿದ್ದಾರೆ. ಅವರು ಈ ಕ್ಷೇತ್ರದಲ್ಲಿ ಭಗೀರಥನಿದ್ದಂತೆ. ಮೇಕೆದಾಟು ವಿಚಾರದಲ್ಲಿ ಸರಕಾರದ ನಿಲುವನ್ನು ಸದನದಲ್ಲೇ ಸ್ಪಷ್ಟವಾಗಿ ತಿಳಿಸಲಾಗಿದೆ. ತಾನು ಅಧಿಕಾರದಲ್ಲಿದ್ದಾಗ ಏನನ್ನೂ ಮಾಡದ ಕಾಂಗ್ರೆಸ್, ಈಗ ಗದ್ದಲ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಹರಿಹಾಯ್ದರು. 

ಕಾಂಗ್ರೆಸ್ ಇದರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದ್ದು, ಜನರನ್ನು ದಿಕ್ಕು ತಪ್ಪಿಸುತ್ತಿದೆ. ಮೇಕೆದಾಟು ಯೋಜನೆಯಿಂದ ಬೆಂಗಳೂರಿಗೆ ಅನುಕೂಲವಾಗಲಿದ್ದು, ಸರಕಾರವು ಇದನ್ನು ಅನುಷ್ಠಾನಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಕುಡಿಯುವ ನೀರಿನ ಪೂರೈಕೆ ಉದ್ದೇಶದ ಈ ಯೋಜನೆಯನ್ನು ಜಾರಿಗೆ ತರದೆ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಅಶ್ವತ್ಥನಾರಾಯಣ ಹೇಳಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top